ಬೆಂಗಳೂರು: ರಾಜ್ಯ ಯುವ ಕಾಂಗ್ರೆಸ್‌ನ ನಿಕಟಪೂರ್ವ ಅಧ್ಯಕ್ಷರಾಗಿದ್ದ ರಕ್ಷಾ ರಾಮಯ್ಯ ಅವರನ್ನು, ಇದೀಗ ಯುವ ಕಾಂಗ್ರೆಸ್ ಸಮಿತಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.
ಈ ಬಗ್ಗೆ ಭಾರತೀಯ ರಾಷ್ಟ್ರೀಯ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಬಿ.ವಿ ಶ್ರೀನಿವಾಸ್ ಅವರು ಆದೇಶ ಹೊರಡಿಸಿದ್ದು, ಈಗಿನಿಂದಲೇ ರಕ್ಷಾ ರಾಮಯ್ಯ ಅವರನ್ನು, ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ. ಪಕ್ಷಕ್ಕೆ ನೀವು ಸಲ್ಲಿಸಿದಂತ ಸೇವೆ ಪರಿಗಣಿಸಿ, ಈ ಹುದ್ದೆ ನೀಡಲಾಗಿದೆ. ಪಕ್ಷ ಸಂಘಟನೆಯನ್ನು ಬಲಪಡಿಸುವ ಕೆಲಸ ಮಾಡುವಂತೆ ತಿಳಿಸಿದ್ದಾರೆ. ತಮ್ಮನ್ನು ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಮಾಡಿದ್ದರ ಬಗ್ಗೆ ಪ್ರತಿಕ್ರಿಯಿಸಿದಂತ ರಕ್ಷಾ ರಾಮಯ್ಯ ಅವರು, ನನಗೆ ಪಕ್ಷ ನೀಡಿದಂತ ಜವಾಬ್ದಾರಿಯನ್ನು ಸ್ವೀಕರಿಸಿದ್ದೇನೆ. ಪಕ್ಷವನ್ನು ಬಲಪಡಿಸೋ ನಿಟ್ಟಿನಲ್ಲಿ, ಸಂಘಟಿಸೋ ಕಾರ್ಯವನ್ನು ಮಾಡುತ್ತೇನೆ ಎಂಬುದಾಗಿ ತಿಳಿಸಿದ್ದಾರೆ.
PublicNext
03/06/2022 03:35 pm