ನವದೆಹಲಿ: ಜೂನ್ 10 ರಂದು ರಾಜ್ಯಸಭೆಯ 57 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಸದ್ಯ 57 ಸ್ಥಾನಗಳಲ್ಲಿ ಈಗಾಗಲೇ 41 ಅಭ್ಯರ್ಥಿಗಳು(11 ರಾಜ್ಯಗಳಿಂದ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಉತ್ತರ ಪ್ರದೇಶದಲ್ಲಿ 11, ತಮಿಳುನಾಡಿನಲ್ಲಿ 6, ಬಿಹಾರದಲ್ಲಿ 5, ಆಂಧ್ರ ಪ್ರದೇಶದಲ್ಲಿ 4, ಮಧ್ಯಪ್ರದೇಶ ಮತ್ತು ಒಡಿಶಾದಲ್ಲಿ ತಲಾ ಮೂವರು, ಛತ್ತೀಸ್ಗಢ, ಪಂಜಾಬ್, ತೆಲಂಗಾಣ ಮತ್ತು ಜಾರ್ಖಂಡ್ನಲ್ಲಿ ತಲಾ ಇಬ್ಬರು ಮತ್ತು ಉತ್ತರಾಖಂಡದಲ್ಲಿ ಒಬ್ಬ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಹರಿಯಾಣ, ರಾಜಸ್ಥಾನ, ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ತೀವ್ರ ಪೈಪೋಟಿ ಏರ್ಪಟ್ಟಿದ್ದು, ಯಾವುದೇ ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆಯನ್ನು ಹಿಂಪಡೆದಿಲ್ಲ.
PublicNext
04/06/2022 10:11 am