ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಾವಣಗೆರೆ: 'ಚಡ್ಡಿ' ಸುಟ್ಟರೆ ನಾವೇನೂ ಸುಮ್ಮನೆ ಇರುವುದಕ್ಕಾಗಲ್ಲ: ಭೈರತಿ ಬಸವರಾಜ್ ಗುದ್ದು

ದಾವಣಗೆರೆ: 'ಚಡ್ಡಿ' ಸುಟ್ಟರೆ ನಾವೇನೂ ಸುಮ್ಮನೆ ಇರುವುದಕ್ಕಾಗಲ್ಲ. ಚಡ್ಡಿ ಸುಟ್ಟಂಥವರು ಇಂದು ಎಲ್ಲರೂ ನಾಶವಾಗಿ ಹೋಗಿದ್ದಾರೆ. ಹಾಗಾಗಿ ಚಡ್ಡಿ ವಿಷಯಕ್ಕೆ ಕೈಹಾಕಿದರೆ ಬೇರೆ ಕಡೆ ಹೇಗೆ ಆಗಿದ್ದಾರೋ ಇಲ್ಲಿಯೂ ಅದೇ ರೀತಿ ಆಗುತ್ತಾರೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಅವರು ಕಾಂಗ್ರೆಸ್ ಮುಖಂಡರಿಗೆ ಎಚ್ಚರಿಕೆ ನೀಡಿದ್ದಾರೆ.

ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ನವರಿಗೆ ಬುದ್ಧಿ ಭ್ರಮಣೆ ಆಗಿದೆ. ಚಡ್ಡಿ ಸುಡುತ್ತೇವೆ ಎನ್ನುವ ಮಾತುಗಳನ್ನು ನೋಡಿದರೆ ಅವರ ಮನಸ್ಥಿತಿ ಏನು ಎಂಬುದು ಅರ್ಥ ಆಗುತ್ತದೆ ಎಂದು ಕಿಡಿಕಾರಿದರು.

ಆರ್ ಎಸ್ ಎಸ್ ಎಂಬ ಸಂಸ್ಥೆ ದೇಶ ಕಟ್ಟುವ ಕೆಲಸ ಮಾಡುತ್ತಿದೆ.‌ ದೇಶದ ಸಂಸ್ಕೃತಿ ಉಳಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿದೆ. ಚಡ್ಡಿ ಸುಡುತ್ತೇವೆ ಎನ್ನುವ ಮೂಲಕ ಕೀಳುಮಟ್ಟದ ರಾಜಕೀಯ ಮಾಡಲು ಕಾಂಗ್ರೆಸ್ ಹೊರಟಿದೆ. ಇದನ್ನು ನಾನು ಖಂಡಿಸುತ್ತೇನೆ. ಇಂಥ ಹೇಳಿಕೆ ನೀಡುವುದು ಸರಿಯಲ್ಲ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬುದ್ದಿ ಸರಿಯಿಲ್ಲ. ಮುಖ್ಯಮಂತ್ರಿಯಾಗಿದ್ದವರು, ವಿರೋಧ ಪಕ್ಷದ ನಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ರೀತಿಯಾದ ಹೇಳಿಕೆ ನೀಡೋದು ಎಷ್ಟು ಸಮಂಜಸ. ಅವರಿಗೂ ಒಂದು ರೀತಿಯಲ್ಲಿ ತಲೆಕಟ್ಟಿದೆ ಎಂದೆನಿಸುತ್ತಿದೆ ಎಂದು ವ್ಯಂಗ್ಯವಾಡಿದರು.

ಯಾವ ಸಂದರ್ಭದಲ್ಲಿ ಚುನಾವಣೆ ಬಂದರೂ ಎದುರಿಸಲು ನಾವು ತಯಾರಿದ್ದೇವೆ. ಶಾಸಕರೆಲ್ಲರೂ ಒಗ್ಗಟ್ಟಾಗಿದ್ದೇವೆ. ಚುನಾವಣೆ ಎದುರಿಸಲು ಸಕಲ ರೀತಿಯ ಸಿದ್ಧತೆ ಮಾಡಿಕೊಂಡಿದ್ದೇವೆ. ಸಚಿವ ಸಂಪುಟ ವಿಸ್ತರಣೆ ಸೇರಿದಂತೆ ಯಾವುದೇ ತೀರ್ಮಾನ ತೆಗೆದುಕೊಳ್ಳುವುದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಪರಮಾಧಿಕಾರ ಇದೆ ಎಂದು ತಿಳಿಸಿದರು.

ರಾಜ್ಯ ಸಭೆ ಚುನಾವಣೆಯಲ್ಲಿ ಮೂರು ಸ್ಥಾನ ಗೆಲ್ಲುತ್ತೇವೆ. ನಮ್ಮಲ್ಲಿ ಶಾಸಕರ ಸಂಖ್ಯಾಬಲ ಹೆಚ್ಚಿದೆ. ಅಭ್ಯರ್ಥಿಗಳ ಗೆಲುವಿಗೆ ಎಲ್ಲಾ ರೀತಿಯ ತಂತ್ರಗಾರಿಕೆ ರೂಪಿಸಿದ್ದೇವೆ. ಪಕ್ಷದ ರಾಜ್ಯಾಧ್ಯಕ್ಷರು, ರಾಜ್ಯ ಬಿಜೆಪಿ ಉಸ್ತುವಾರಿ, ಶಾಸಕರು, ಮುಖಂಡರು ಕುಳಿತು ಚರ್ಚಿಸುತ್ತೇವೆ. ಎರಡು ಸ್ಥಾನಗಳಿಗೆ ತಲಾ 45 ಮತಗಳು ಬೇಕು. ಈ ಸಂಖ್ಯೆ ನಮ್ಮಲ್ಲಿದೆ. ಇನ್ನು 32 ಮತಗಳು ಉಳಿಯುತ್ತವೆ. ನಾವು ಮೂರನೇ ಅಭ್ಯರ್ಥಿಯನ್ನೂ ಗೆಲ್ಲಿಸುವ ಶಕ್ತಿ ನಮ್ಮಲ್ಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Edited By : Manjunath H D
PublicNext

PublicNext

05/06/2022 01:31 pm

Cinque Terre

104.85 K

Cinque Terre

16

ಸಂಬಂಧಿತ ಸುದ್ದಿ