ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಆಮ್ ಆದ್ಮಿ ಪಕ್ಷ ಸೇರಲಿದ್ದಾರೆ ಮುಖ್ಯಮಂತ್ರಿ ಚಂದ್ರು

ಬೆಂಗಳೂರು: ಹಲವು ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದಲ್ಲಿದ್ದು, ಹಿರಿಯ ನಾಯಕರಾಗಿ ಗುರುತಿಸಿಕೊಂಡಿದ್ದ ಖ್ಯಾತ ನಟ ಮುಖ್ಯಮಂತ್ರಿ ಚಂದ್ರು, ಕೆಲ ದಿನಗಳ ಹಿಂದೆ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದರು. ಈ ಬಳಿಕ ಇದೀಗ ನಾಳೆ ಮಂಗಳವಾರ ಅಧಿಕೃತವಾಗಿ ಅಮ್ ಆದ್ಮಿ ಪಕ್ಷವನ್ನು ಸೇರ್ಪಡೆಗೊಳ್ಳಲಿದ್ದಾರೆ.

ಈ ಕುರಿತಂತೆ ಎಎಪಿಯಿಂದ ಮಾಹಿತಿ ಬಿಡುಗಡೆ ಮಾಡಿದ್ದು, ನಾಡಿನ ಸಜ್ಜನ ಗಣ್ಯರ ಆಮ್‌ ಆದ್ಮಿ ಪಾರ್ಟಿ ಸೇರ್ಪಡೆ ಪರ್ವ ಮುಂದುವರಿದಿದ್ದು, ಈಗ ಖ್ಯಾತ ನಟ ಹಾಗೂ ವಿಧಾನಸಭೆ, ವಿಧಾನ ಪರಿಷತ್ ಮಾಜಿ ಸದಸ್ಯ ಶ್ರೀ ಮುಖ್ಯಮಂತ್ರಿ ಚಂದ್ರು ಆಮ್‌ ಆದ್ಮಿ ಪಾರ್ಟಿ ಸೇರ್ಪಡೆಯಾಗುತ್ತಿದ್ದಾರೆ ಎಂಬುದಾಗಿ ತಿಳಿಸಿದೆ. ನಾಳೆ ಬೆಳಿಗ್ಗೆ 11.30ಕ್ಕೆ ಕರ್ನಾಟಕ ಎಎಪಿ ರಾಜ್ಯಾಧ್ಯಕ್ಷ ಪೃಥ್ವಿರೆಡ್ಡಿ ಅವರ ಸಮ್ಮುಖದಲ್ಲಿ, ಬೆಂಗಳೂರಿನ ಪರಾಗ್ ಹೋಟೆಲ್ ನಲ್ಲಿ ನಡೆಯಲಿರುವಂತ ಸರಳ ಕಾರ್ಯಕ್ರಮದಲ್ಲಿ ನಟ ಮುಖ್ಯಮಂತ್ರಿ ಚಂದ್ರು ಅವರು ಎಎಪಿ ಪಕ್ಷವನ್ನು ಅಧಿಕೃತವಾಗಿ ಸೇರ್ಪಡೆಗೊಳ್ಳಲಿದ್ದಾರೆ.

Edited By : Nagaraj Tulugeri
PublicNext

PublicNext

06/06/2022 06:49 pm

Cinque Terre

67.22 K

Cinque Terre

14

ಸಂಬಂಧಿತ ಸುದ್ದಿ