ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮತ್ತೊಮ್ಮೆ ಬಿಜೆಪಿಯನ್ನು ಅಧಿಕಾರಕ್ಕೆ ತರಲು ದುಡಿಯುತ್ತೇನೆ: ಯಡಿಯೂರಪ್ಪ

ಬೆಳಗಾವಿ: ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಶಕ್ತಿಮೀರಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಈ ಬಾರಿಯ ವಿಧಾನ ಸಭೆ ಚುನಾವಣೆಯಲ್ಲಿ 140ರಿಂದ 150ರಿಂದ ಸ್ಥಾನಗಳನ್ನು ಗೆಲ್ಲುವುದೇ ನಮ್ಮ ಗುರಿ ಎಂದು ಮಾಜಿ ಸಿಎಂ ಹಾಗೂ ಶಾಸಕ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಭಾರತೀಯ ಜನತಾ ಪಕ್ಷವು ಸಾಮೂಹಿಕ ನಾಯಕತ್ವ ಇದೆ. ಇದೇ ಆಧಾರದಲ್ಲಿ ಅದು ಮುನ್ನಡೆಯುತ್ತದೆ. ಹೀಗಾಗಿ ಚುನಾವಣೆಯಲ್ಲಿ ಯಾರು ಮುಂದಾಳತ್ವ ವಹಿಸುತ್ತಾರೆ ಅನ್ನೋದು ಮುಖ್ಯವಲ್ಲ. ಈಗಾಗಲೇ ನಾವು ಚುನಾವಣೆ ತಯಾರಿ ನಡೆಸಿದ್ದೇವೆ. ಟಿಕೆಟ್ ಹಂಚಿಕೆ ವಿಚಾರವಾಗಿ ಪ್ರಧಾನಿ ಮೋದಿ ಅವರ ಸಲಹೆಯಂತೆ ಮುನ್ನಡೆಯುತ್ತೇವೆ. ಆದರೆ ನಮ್ಮಲ್ಲಿ ಟಿಕೆಟ್ ಹಂಚಿಕೆ ವಿಚಾರವಾಗಿ ನಮ್ಮಲ್ಲಿ ಇನ್ನೂ ಚರ್ಚೆ ಆಗಿಲ್ಲ ಎಂದು ತಿಳಿಸಿದ್ದಾರೆ.

Edited By : Nagaraj Tulugeri
PublicNext

PublicNext

07/06/2022 03:50 pm

Cinque Terre

24.27 K

Cinque Terre

8