ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

'2023ರ ವಿಧಾನಸಭೆ ಚುನಾವಣೆಯಲ್ಲಿ ವಿಜಯೇಂದ್ರ ಸ್ಪರ್ಧೆ ಫಿಕ್ಸ್‌'

ವಿಜಯಪುರ: 2023ರ ವಿಧಾನಸಭೆ ಚುನಾವಣೆಯಲ್ಲಿ ಪುತ್ರ ಬಿ.ವೈ. ವಿಜಯೇಂದ್ರ ಸ್ಪರ್ಧೆ ಮಾಡಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ, ರಾಜ್ಯ ಬಿಜೆಪಿ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ವಿಧಾನಸಭೆ ಚುನಾವಣೆಗೆ ವಿಜಯೇಂದ್ರ ಸ್ಪರ್ಧಿಸುತ್ತಾರೆ. ಅವರು ಯಾವುದೇ ಕ್ಷೇತ್ರದಿಂದ ಸ್ಪರ್ಧಿಸಿದರೂ ಗೆದ್ದು ಬರುತ್ತಾರೆ. ಮುಂದಿನ ದಿನಗಳಲ್ಲಿ ಜನರ ಆಶೀರ್ವಾದದಿಂದ ಒಳ್ಳೆ ಅವಕಾಶ ಸಿಗುತ್ತದೆ. ಭವಿಷ್ಯದಲ್ಲಿ ಬೆಳೆಯುತ್ತಾನೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದರು.

ಯಡಿಯೂರಪ್ಪ ಮತ್ತು ಕುಟುಂಬವನ್ನು ಬಿಜೆಪಿ ಪಕ್ಕಕ್ಕೆ ಸರಿಸಿದೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಯಡಿಯೂರಪ್ಪ ಅವರು, 'ಸಿದ್ದರಾಮಯ್ಯ ಅವರಿಂದ ನನಗೆ ಯಾವುದೇ ಸರ್ಟಿಫಿಕೇಟ್ ಬೇಕಿಲ್ಲ. ಬಿಜೆಪಿ ನನಗೆ ಕೊಟ್ಟಿರುವ ಸ್ಥಾನಮಾನ ಬೇರೆ ಯಾರಿಗೂ ಸಿಕ್ಕಿಲ್ಲ. ನಾನು 4 ಬಾರಿ ಸಿಎಂ ಆಗಿದ್ದೆ. ಎಲ್ಲಾ ಅವಕಾಶ ಸಿಕ್ಕಿದೆ. ಸಿಎಂ ಸ್ಥಾನಕ್ಕೆ ನಾನೇ ರಾಜೀನಾಮೆ ಕೊಟ್ಟು ಬಂದಿದ್ದೇನೆ' ಎಂದು ಹೇಳಿದರು.

Edited By : Vijay Kumar
PublicNext

PublicNext

08/06/2022 12:39 pm

Cinque Terre

26.97 K

Cinque Terre

3