ಬೆಂಗಳೂರು : ಇಂದು ರಾಜ್ಯಸಭೆ ಚುನಾವಣೆ ಮತದಾನದ ಪ್ರಕ್ರಿಯೆ ಆರಂಭವಾಗಿದೆ. 15 ರಾಜ್ಯಗಳಲ್ಲಿ 57 ರಾಜ್ಯಸಭಾ ಸೀಟುಗಳನ್ನ ಅಲಂಕರಿಸಲು ವಿವಿಧ ರಾಜಕೀಯ ಪಕ್ಷಗಳ ನಡುವೆ ಪೈಪೋಟಿ ಶುರುವಾಗಿದೆ.
ಸದಸ್ಯರ ನಿವೃತ್ತಿಯಿಂದಾಗಿ ಖಾಲಿಯಾಗಿರುವ ರಾಜ್ಯಸಭೆ ಸ್ಥಾನಗಳಿಗೆ ಇಂದು ಚುನಾವಣೆ ನಡೆಯುತ್ತಿದೆ. ಇನ್ನು ಬೆಳಿಗ್ಗೆಯಿಂದಲೇ ಮತದಾನ ಪ್ರಕ್ರಿಯೆ ಆರಂಭಗೊಂಡಿದ್ದು ಬಿಜೆಪಿಯ ಮೊದಲ ಅಭ್ಯರ್ಥಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮೊದಲ ಪ್ರಾಶಸ್ತ್ಯದ 46 ಮತಗಳನ್ನು ಪಡೆಯುವ ಮೂಲಕ ಒಂದು ಹಂತದಲ್ಲಿ ಗೆದ್ದು ಬೀಗಿದ್ದಾರೆ.
ಇನ್ನು ಸಂಜೆ ವೇಳೆಗೆ ಚುನಾವಣಾ ಆಯೋಗ ಅಧಿಕೃತವಾಗಿ ಘೋಷಣೆ ಮಾಡಲಿದೆ.
PublicNext
10/06/2022 11:02 am