ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಿಜೆಪಿಗೆ ಹೆದರಿದ ಕಾಂಗ್ರೆಸ್ ನಿಂದ ಮಾಸ್ಟರ್ ಪ್ಲಾನ್ : ಇಂಟರ್ ನೆಟ್ ಸೇವೆ ಕಟ್

ಜೈಪುರ: ಇಂದು ಸಂಸತ್ತಿನ ಮೇಲ್ಮನೆಗೆ ಮತದಾನ ನಡೆಯಲಿದೆ. ಹೀಗಾಗಿ ಎಲ್ಲಾ ಕಾಂಗ್ರೆಸ್ ಶಾಸಕರನ್ನು ಅಮೇರ್ ಪ್ರದೇಶದ ಹೋಟೆಲ್ ಲೀಲಾಗೆ ಸ್ಥಳಾಂತರಿಸಲಾಗಿದ್ದು, ಅಲ್ಲಿ ಇಂಟರ್ ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಕೊನೆ ಕ್ಷಣದಲ್ಲಿ ಬಿಜೆಪಿ ತನ್ನ ಶಾಸಕರನ್ನು ಸೆಳೆಯಬಹುದು ಎಂಬ ಭೀತಿಯಿಂದ ರಾಜಸ್ಥಾನ ಸರ್ಕಾರ ಜೈಪುರ ಜಿಲ್ಲೆಯ ಅಮೇರ್ ಪ್ರದೇಶದಲ್ಲಿ ಇಂಟರ್ ನೆಟ್ ಸೇವೆಯನ್ನು ಸ್ಥಗಿತಗೊಳಿಸಿದೆ.

ಶುಕ್ರವಾರ ನಡೆಯಲಿರುವ ರಾಜ್ಯಸಭಾ ಚುನಾವಣೆ ಮತದಾನಕ್ಕೂ ಮುನ್ನ ರಾಜಸ್ಥಾನದ ಕಾಂಗ್ರೆಸ್ ಶಾಸಕರನ್ನು ಉದಯಪುರದಿಂದ ಜೈಪುರಕ್ಕೆ ಸ್ಥಳಾಂತರಿಸಲಾಯಿತು ಮತ್ತು ಸಂಸತ್ತಿನ ಮೇಲ್ಮನೆಯಲ್ಲಿ ಮೂರು ಸ್ಥಾನಗಳನ್ನು ಪಡೆಯಲು ಕಾಂಗ್ರೆಸ್ ಸರ್ಕಸ್ ನಡೆಸುತ್ತಿದೆ.

ಉದಯಪುರದಿಂದ ಹಿಂದಿರುಗಿದ ನಂತರ ಕೆಲ ಕಾಂಗ್ರೆಸ್ ಶಾಸಕರು ಗುರುವಾರ ರಾತ್ರಿ 9 ಗಂಟೆಯಿಂದ ಶುಕ್ರವಾರ ಬೆಳಗ್ಗೆ 9 ಗಂಟೆಯವರೆಗೆ ಜೈಪುರದ ಅಮೇರ್ ಪ್ರದೇಶದಲ್ಲಿ ತಂಗಿದ್ದಾರೆ.

Edited By : Nirmala Aralikatti
PublicNext

PublicNext

10/06/2022 11:40 am

Cinque Terre

42.86 K

Cinque Terre

1

ಸಂಬಂಧಿತ ಸುದ್ದಿ