ಬೆಂಗಳೂರು: ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯುತ್ತಿರುವ ಚುನಾವಣೆಯಲ್ಲಿ ಜೆಡಿಎಸ್ ಶಾಸಕ ಕೆ ಶ್ರೀನಿವಾಸ್ ಗೌಡ ಅವರು ಕಾಂಗ್ರೆಸ್‌ಗೆ ಮತ ಹಾಕಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಶಾಸಕರೇ ಖುದ್ದಾಗಿ ಹೇಳಿಕೊಂಡಿದ್ದಾರೆ.
ಮತಚಲಾವಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕಾಂಗ್ರೆಸ್ ಪಕ್ಷವನ್ನ ಪ್ರೀತಿಸುತ್ತೇನೆ. ಹೀಗಾಗಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ಚಲಾಯಿಸಿದ್ದೇನೆ ಎಂದರು. ಈ ಹಿಂದೆ ಕಾಂಗ್ರೆಸ್ನಲ್ಲಿ ಇದ್ದವ, ಮುಂದೆ ಕಾಂಗ್ರೆಸ್ ಗೆ ಸೇರಲಿದ್ದೇನೆ ಎಂದು ಇದೇ ವೇಳೆ ಹೇಳಿದರು. ಜೊತೆಗೆ ಕುಮಾರಸ್ವಾಮಿಗಳು ಜೆಡಿಎಸ್ ಅಭ್ಯರ್ಥಿಗೆ ಮತ ಹಾಕುವಂತೆ ಹೇಳಿರಲಿಲ್ಲ ಎಂದರು.
ಇನ್ನು ಎಚ್.ಡಿ. ಕುಮಾರಸ್ವಾಮಿ ನಿಮ್ಮ ಬಗ್ಗೆ ಗರಂ ಆಗಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಸಿಟ್ಟಾದ್ರೆ ಆಗಲಿ ಬಿಡಿ. ರಾಜಕೀಯದಲ್ಲಿ ಇವೆಲ್ಲವೂ ಕಾಮನ್. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದೇನೆ ಎಂದರು.
PublicNext
10/06/2022 01:07 pm