ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪ.ಬಂ ವಿಧಾನಸಭಾ ಚುನಾವಣೆ ಸೋಲಿಗೆ ಕೊರೊನಾ ಕಾರಣ ಕೊಟ್ಟ ಬಿಜೆಪಿ

ಕೋಲ್ಕತ್ತಾ: ಕೊರೊನಾ ಕಾರಣದಿಂದ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲು ಕಂಡಿತು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಹೇಳಿದ್ದಾರೆ.

ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಅವರು, 'ಕೋವಿಡ್-19 ಕಾರಣದಿಂದಾಗಿ 2021ರ ವಿಧಾನಸಭಾ ಚುನಾವಣೆಯಲ್ಲಿ ಅಗತ್ಯವಿರುವಷ್ಟು ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗದ ಹಿನ್ನೆಲೆಯಲ್ಲಿ ನಮ್ಮ ಪಕ್ಷವು ಪಶ್ಚಿಮ ಬಂಗಾಳದಲ್ಲಿ ಅಧಿಕಾರಕ್ಕೆ ಬರಲಿಲ್ಲ. ಕೋವಿಡ್ ಸೋಂಕಿತ ಸಂಖ್ಯೆ ಏರಿಕೆಯಿಂದಾಗಿ ಬಿಜೆಪಿಗೆ ಸರಿಯಾಗಿ ಪ್ರಚಾರ ಮಾಡಲು ಸಾಧ್ಯವಾಗಲಿಲ್ಲ. ಆದರೆ ಇನ್ನೂ ಹೆಚ್ಚಿನ ಚುನಾವಣೆಗಳಿವೆ. ಅದರಲ್ಲಿ ಬಿಜೆಪಿ ಗೆಲ್ಲುತ್ತದೆ' ಎಂದು ಗುಡುಗಿದರು.

Edited By : Vijay Kumar
PublicNext

PublicNext

10/06/2022 02:08 pm

Cinque Terre

29.91 K

Cinque Terre

0

ಸಂಬಂಧಿತ ಸುದ್ದಿ