ಬೆಂಗಳೂರು: ಇಂದು ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಮೂರು ಸ್ಥಾನಗಳನ್ನು ತನ್ನದಾಗಿಸಿಕೊಂಡಿದೆ. ಮೂರು ಅಭ್ಯರ್ಥಿಗಳ ಗೆಲುವಿಗೆ ಪ್ರಧಾನಿ ನರೇಂದ್ರ ಮೋದಿ, ಸಿಎಂ ಬಸವರಾಜ ಬೊಮ್ಮಾಯಿಗೆ ಕರೆ ಮಾಡಿ ಅಭಿನಂದಿಸಿದ್ದಾರೆ.
ಈ ಕುರಿತಂತೆ ಮಾಹಿತಿ ನೀಡಿದಂತ ಸಿಎಂ ಬಸವರಾಜ ಬೊಮ್ಮಾಯಿಯವರು, ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ತಮ್ಮ ತಂತ್ರಗಾರಿಕೆಯ ಮೂಲಕ ಮೂವರನ್ನು ಗೆಲ್ಲಿಸುವಲ್ಲಿ ಪ್ರಮುಖ ಪಾತ್ರ ವಹಿಸಿ ಯಶಸ್ವಿಯಾಗಿದಕ್ಕೆ ದೂರವಾಣಿ ಮೂಲಕ ಶುಭಾಶಯ ಕೋರಿ ಶ್ಲಾಘಿಸಿದರು ಎಂದು ತಿಳಿಸಿದ್ದಾರೆ.
ಮೂವರನ್ನು ರಾಜ್ಯಸಭೆಗೆ ಕಳುಹಿಸುವಲ್ಲಿ ತಾವು ಪಟ್ಟ ಪ್ರಯತ್ನ ಅಮೂಲ್ಯವಾದದ್ದು ಕರ್ನಾಟಕ ರಾಜ್ಯದ ಈ ಕೊಡುಗೆ ಸರಣಿಯ ಇನ್ನಷ್ಟು ಅತ್ಯುತ್ತಮವಾಗಿ ಕೆಲಸ ಮಾಡುವಂತೆ ಪ್ರಧಾನಿ ಮೋದಿಯವರು ಪ್ರೋತ್ಸಾಹಿಸಿರುವುದಾಗಿ ಹೇಳಿದರು. ಇದೇ ಸಂದರ್ಭದಲ್ಲಿ ಸಿಎಂ ಬೊಮ್ಮಾಯಿ ಟ್ವೀಟ್ ಮೂಲಕ ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಜಯಗಳಿಸಿದ ನಿರ್ಮಲಾ ಸೀತಾರಾಮನ್, ನಟ ಜಗ್ಗೇಶ್ ಹಾಗೂ ಲೆಹರ್ ಸಿಂಗ್ ಅವರಿಗೆ ಹಾರ್ದಿಕ ಅಭಿನಂದನೆಗಳು. ಕನ್ನಡಿಗರ ದನಿಯಾಗಿ ತಾಯಿ ಭಾರತಾಂಬೆಯ ಸೇವೆಯನ್ನು ಯಶಸ್ವಿಯಾಗಿ ನಿರ್ವಹಿಸುವ ಶಕ್ತಿ ನಿಮ್ಮದಾಗಲಿ ಎಂದು ಶುಭ ಹಾರೈಸಿದ್ದಾರೆ.
PublicNext
10/06/2022 10:55 pm