ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡಮತದಾನ: ಜೆಡಿಎಸ್‌ ಶಾಸಕ ಶ್ರೀನಿವಾಸಗೌಡರ ಕೈಲಾಸ ಸಮಾರಾಧನೆಗೆ ನಿರ್ಧಾರ!

ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿದ್ದೇನೆಂದು ಕೋಲಾರ ಜೆಡಿಎಸ್ ಶಾಸಕ ಶ್ರೀನಿವಾಸಗೌಡ ಬಹಿರಂಗವಾಗಿ ನಿನ್ನೆ (ಶುಕ್ರವಾರ) ಹೇಳಿಕೆ ನೀಡಿದ್ದರು. ಇದರಿಂದ ಆಕ್ರೋಶಗೊಂಡ ಕೋಲಾರದ ಜನತೆ ಶ್ರೀನಿವಾಸಗೌಡ ವಿರುದ್ದ ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜೆಡಿಎಸ್ ಮುಖಂಡರು ಹಾಗು ಕಾರ್ಯಕರ್ತರು ಶ್ರೀನಿವಾಸಗೌಡ ಮನೆ ಎದುರು ಪ್ರತಿಭಟನೆ ನಡೆಸಿದ ಹಿನ್ನಲೆ, ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಕೋಲಾರ ನಗರದ ಮಹಾಲಕ್ಷ್ಮಿ ಲೇಔಟ್ ನ ನಿವಾಸದ ಎದುರು ಜೆಡಿಎಸ್ (JDS) ಮುಖಂಡರು, ಕಾರ್ಯಕರ್ತರು ಜಮಾಯಿಸಿ ಶಾಸಕ ರಾಜಿನಾಮೆಗೆ ಆಗ್ರಹಿಸಿದರು.

ಅಷ್ಟೇ ಅಲ್ಲದೆ ಕೋಲಾರ ಕ್ಷೇತ್ರದ ಮತದಾರರು, ಶ್ರೀನಿವಾಸಗೌಡ ಅವರು ಬದುಕಿರುವಾಗಲೇ ತಿಥಿ ಮಾಡುವ ನಿರ್ಧಾರ ಮಾಡಿದ್ದಾರೆ. ಈ ಕುರಿತ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು ಅದರಲ್ಲಿ, 'ಕುಮಾರ ಸೇನಾ ಪಡೆ ಜೂನ್ 21ರಂದು ಕೈಲಾಸ ಸಮಾರಾಧನೆ' ಎಂದು ಬರೆಯಲಾಗಿದೆ.

Edited By : Vijay Kumar
PublicNext

PublicNext

11/06/2022 11:55 am

Cinque Terre

68.26 K

Cinque Terre

1