ನವದೆಹಲಿ: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರಿಗೆ ಇಡಿ ನೋಟೀಸ್ ಕೊಟ್ಟಿರುವುದನ್ನು ವಿರೋಧಿಸಿ ದೇಶಾದ್ಯಂತ ಇಂದು ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು.
ಈ ವೇಳೆ ರಾಷ್ಟ್ರೀಯ ಯೂತ್ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಅವರನ್ನು ಪೊಲೀಸರು ವಶಕ್ಕೆ ಪಡೆಯಲು ಯತ್ನಿಸಿದರು. ಇದರಿಂದ ಕಂಗಾಲಾದ ಶ್ರೀನಿವಾಸ್, ಪೊಲೀಸರಿಂದ ತಪ್ಪಿಸಿಕೊಳ್ಳುವ ಯತ್ನಿಸಿದರು. ಕೊನೆಗೆ ತಾವು ಕುಳಿತಿದ್ದ ಕಾರಿನಿಂದ ಇಳಿದು, ಎದ್ದೆನೋ ಬಿದ್ದೆನೋ ಅಂತ ಓಡಿ ಹೋದರು. ಬಳಿಕ ದೆಹಲಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಈ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
PublicNext
13/06/2022 08:09 pm