ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿಚಾರಣೆ ಎರಡನೇ ದಿನವಾದ ಇಂದು ಕೂಡ ಮುಂದುವರೆದಿದ್ದು, ಅವರನ್ನು ಭೇಟಿ ಮಾಡಲು ಹೊರಟ ಸಂಸದ ಡಿ.ಕೆ. ಸುರೇಶ್, ಮಾಜಿ ಸಚಿವ ದಿನೇಶ್ ಗುಂಡೂರಾವ್ ಮತ್ತಿತರ ಕಾಂಗ್ರೆಸ್ ಮುಖಂಡರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಾಂಗ್ರೆಸ್ ಕಚೇರಿಗೆ ಹೊರಟ ಈ ನಾಯಕರನ್ನು ಪೊಲೀಸರು ತಡೆದು ನಿಲ್ಲಿಸಿದ್ದಾರೆ. ಈ ವೇಳೆ ಡಿ.ಕೆ. ಸುರೇಶ್ ಹಾಗೂ ಪೊಲೀಸರ ನಡುವೆ ವಾಗ್ವಾದ, ಮಾತಿನ ಚಕಮಕಿ, ತಳ್ಳಾಟ, ನೂಕಾಟ ನಡೆಯಿತು. ಅಷ್ಟೇ ಅಲ್ಲದೆ ಪೊಲೀಸರೊಬ್ಬರು ಹಿಂಬದಿಯಿಂದ ಡಿ.ಕೆ ಸುರೇಶ್ ಅವರನ್ನು ತಳ್ಳಿ ಅನಾಮತ್ತಾಗಿ ಬಸ್‌ಗೆ ಹೊತೈದಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, ಬಿಜೆಪಿ ಸರ್ಕಾರದ ವಿರುದ್ಧ ಹೋರಾಟ ಮತ್ತೊಮ್ಮೆ ಬ್ರಿಟಿಷ್ ಸಾಮ್ರಾಜ್ಯಶಾಹಿಯ ವಿರುದ್ಧದ ಹೋರಾಟವನ್ನು ನೆನಪಿಸುತ್ತಿದೆ, ಹೋರಾಡುತ್ತೇವೆ. ದೇಶವನ್ನು ಫ್ಯಾಸಿಸ್ಟ್ ಶಕ್ತಿಗಳಿಂದ ಮುಕ್ತಗೊಳಿಸುತ್ತೇವೆ. ಆ ಬದ್ಧತೆ ನಮಗಿದೆ ಎಂದು ಅಸಮಾಧಾನ ಹೊರಹಾಕಿದೆ.
PublicNext
14/06/2022 03:46 pm