ಬೆಂಗಳೂರು: ಮೇಕೆದಾಟು ಯೋಜನೆ ಸಂಬಂಧ ತಮಿಳುನಾಡು ಸಿಎಂ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿರುವ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ಪ್ರಧಾನಿ ಅವರಿಗೆ ತಮಿಳುನಾಡು ಮುಖ್ಯಮಂತ್ರಿ ಬರೆದಿರುವ ಪತ್ರವನ್ನು ತರಿಸಿಕೊಂಡು ತಕರಾರಿನ ಅಂಶಗಳ ಬಗ್ಗೆ ತಿಳಿದುಕೊಳ್ಳುವೆ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ಜೂ.16ರಂದು ನಿಗದಿಯಾಗಿದ್ದು, ಕರ್ನಾಟಕ, ತಮಿಳುನಾಡು, ಪಾಂಡಿಚೇರಿ, ಕೇಂದ್ರ ಸರ್ಕಾರದ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಈಗಾಗಲೇ ಪ್ರಾಧಿಕಾರದ 15 ಸಭೆಗಳಾಗಿದ್ದು, ತಮಿಳುನಾಡು ಪಾಲ್ಗೊಳ್ಳದೆ ಅಸಹಕಾರ ತೋರಿದೆ ಎಂದರು.
ಕೇಂದ್ರ ಸರ್ಕಾರಕ್ಕೆ ತಮಿಳುನಾಡು ಸರ್ಕಾರ ಪತ್ರ ಬರೆದಿರುವುದು ಕಾನೂನು ಬಾಹಿರ. ಒಕ್ಕೂಟ ವ್ಯವಸ್ಥೆಯ ವಿರುದ್ಧವಷ್ಟೇ ಅಲ್ಲ, ನಮ್ಮ ರಾಜ್ಯದ ನೀರಿನ ಹಕ್ಕು ದುರ್ಬಳಕೆ ಮಾಡಿಕೊಳ್ಳಲು ಹುನ್ನಾರ ಹೂಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
PublicNext
14/06/2022 04:13 pm