ನವದೆಹಲಿ: ದೇಶದಾದ್ಯಂತ ನ್ಯಾಷನಲ್ ಹೆರಾಲ್ಡ್ (ಪತ್ರಿಕೆ) ಹಗರಣ ಮತ್ತೆ ಚರ್ಚೆಯಾಗುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ. ಬಿಗಿ ಭದ್ರತೆಯೊಂದಿಗೆ ರಾಹುಲ್ ಗಾಂಧಿ ಅವರು ವಿಚಾರಣೆಗೆ ಹಾಜರಾಗಿದ್ದರು.
ಬೆಳಿಗ್ಗೆಯಿಂದ ರಾತ್ರಿಯವರೆಗೆ ರಾಹುಲ್ ಗಾಂಧಿ ಅವರು ಇಡಿ ಪ್ರಶ್ನೆಗಳಿಗೆ ಉತ್ತರಿಸಿದರು. ಆದರೆ, ವಿಚಾರಣೆ ಇನ್ನೂ ಅಪೂರ್ಣವಾಗಿದ್ದು, ಇಂದು (ಮಂಗಳವಾರ) ಕೂಡ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿಚಾರಣೆ ನಡೆಸಲಿದ್ದಾರೆ. ಅಲ್ಲದೇ ಬಂಧನದ ಭೀತಿ ಎದುರಾಗಿದೆ.
PublicNext
14/06/2022 06:56 pm