ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಜಯನಗರ: ಕೂಡ್ಲಿಗಿ ಬಳಿ ನಡೆದ ಭೀಕರ ಅಪಘಾತದಲ್ಲಿ 14 ಮಂದಿಗೆ ಗಾಯ

ವಿಜಯನಗರ : ಕೂಡ್ಲಿಗಿ ತಾಲೂಕಿನ ಅಮಲಾಪುರ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕೆಎಸ್‌ಆರ್‌ಟಿಸಿ ಬಸ್ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ 14 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.

ಅಮಲಾಪುರ ಬಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಅಪಘಾತ ಸಂಭವಿಸಿದ್ದು, ಬೆಂಗಳೂರಿನಿಂದ ಹೊಸಪೇಟೆಗೆ ಬರುತ್ತಿದ್ದ ಕೆಎಸ್ಆರ್‌ಟಿಸಿ ಬಸ್, ಲಾರಿಗೆ ಹಿಂಬದಿಯಿಂದ ಡಿಕ್ಕಿಯಾಗಿದ್ದು, ಸಾರಿಗೆ ಬಸ್‌ನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಬಸ್ ನಲ್ಲಿದ್ದ 11 ಜನರಿಗೆ ಗಾಯವಾಗಿದೆ. ಓರ್ವನ ಸ್ಥಿತಿ ಗಂಭೀರವಾಗಿದೆ. ಗಾಯಗೊಂಡವರನ್ನು ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾನಾಹೊಸಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Nagaraj Tulugeri
PublicNext

PublicNext

15/06/2022 11:59 am

Cinque Terre

34.13 K

Cinque Terre

0

ಸಂಬಂಧಿತ ಸುದ್ದಿ