ಬೆಳಗಾವಿ: ಕರ್ನಾಟಕ ವಿಧಾನ ಪರಿಷತ್ ವಾಯುವ್ಯ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ 4,512 ಮತಗಳ ಅಂತರದಿಂದ ಭರ್ಜರಿ ಗೆಲುವಿನ ನಗೆ ಬೀರಿದ್ದಾರೆ. ಸದ್ಯ ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.
ಒಟ್ಟು 20,000 ಮತಗಳ ಪೈಕಿ ಪ್ರಕಾಶ ಹುಕ್ಕೇರಿ ಅವರು 10,520 ಮತ ಪಡೆದರೆ, ಪ್ರತಿಸ್ಪರ್ಧಿ ಬಿಜೆಪಿಯ ಅರುಣ್ ಶಹಾಪುರ್ 6,008 ಮತ ಪಡೆದು ಸೋಲೋಪ್ಪಿಕೊಂಡಿದ್ದಾರೆ.
ವಿಧಾನ ಪರಿಷತ್ನ ನಾಲ್ಕು ಸ್ಥಾನಗಳಿಗೆ ಜೂನ್ 13ರಂದು ನಡೆದಿತ್ತು. ವಾಯುವ್ಯ ಪದವೀಧರ, ವಾಯುವ್ಯ ಶಿಕ್ಷಕರ ಕ್ಷೇತ್ರದಲ್ಲಿ ವಿಜಯಪುರ, ಬಾಗಲಕೋಟೆ, ಬೆಳಗಾವಿ ಜಿಲ್ಲೆಗಳಿದ್ದವು. ವಾಯುವ್ಯ ಶಿಕ್ಷಕರ ಕ್ಷೇತ್ರದಲ್ಲಿ ಶೇ 80, ಮತದಾನವಾಗಿತ್ತು. ಇನ್ನು ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿಗೆ ಜಯವಾಗಿದೆ. 8 ಬಾರಿ ಗೆದ್ದ ದಾಖಲೆಯನ್ನು ಬಸವರಾಜ ಹೊರಟ್ಟಿ ನಿರ್ಮಿಸಿದ್ದಾರೆ.
PublicNext
15/06/2022 06:28 pm