ಬೆಂಗಳೂರು: ಕಾಂಗ್ರೆಸ್ ನಾಯಕ ಇ.ಡಿ.ವಿಚಾರಣೆ ಎದುರಿಸುತ್ತಿರುವ ಬೆನ್ನಲ್ಲೇ ದೇಶದಾದ್ಯಂತ ಕಾಂಗ್ರೆಸ್ ನಾಯಕರುಗಳ ಪ್ರತಿಭಟನೆ ನಡೆಯುತ್ತಿದೆ.ಇದರ ಮಧ್ಯೆ ರಾಹುಲ್ ಗಾಂಧಿ ಮೇಲೆ ಅತ್ಯಾಚಾರ ಆಗುತ್ತಿದೆ ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ನೀಡಿರುವ ಹೇಳಿಕೆಯೊಂದು ಭಾರೀ ವೈರಲ್ ಆಗುತ್ತಿದೆ.
ಇನ್ನು ಕಾಂಗ್ರೆಸ್ ಭವನದಲ್ಲಿ ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸುತ್ತಿರುವ ಸಂದರ್ಭದಲ್ಲಿ ಪೊಲೀಸರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದರು.
ಈ ವೇಳೆ ಬಸ್ ನಲ್ಲಿ ಹೋಗುವಾಗ ಮಾತನಾಡಿರುವ ನಲಪಾಡ್, ಇವತ್ತು ರಾಹುಲ್ ಗಾಂಧಿ ಅವರ ಮೇಲೆ ಅತ್ಯಾಚಾರ ಆಗ್ತಿದೆ. ಪ್ರತಿಯೊಬ್ಬ ಭಾರತೀಯನ ಮೇಲೆ ಆಗ್ತಿದೆ ಎಂದಿರುವ ವೀಡಿಯೋ ಹರಿದಾಡುತ್ತಿದೆ.
PublicNext
16/06/2022 04:07 pm