ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸದನದಲ್ಲೇ ಅಶಿಸ್ತಿನ ವರ್ತನೆ; 7 ಬಿಜೆಪಿ ಶಾಸಕರ ಅಮಾನತು ವಾಪಸ್‌

ಕೋಲ್ಕತ್ತಾ: ಪಶ್ಚಿಮ ಬಂಗಾಳದ ವಿಧಾನ ಸಭೆಯಲ್ಲಿ ಅಶಿಸ್ತಿನ ವರ್ತನೆ ತೋರಿದ್ದ ಆರೋಪದ ಮೇಲೆ ಅಮಾನತುಗೊಂಡಿದ್ದ 7 ಬಿಜೆಪಿ ಶಾಸಕರ ಅಮಾನತನ್ನು ವಾಪಸ್ ಪಡೆಯಲಾಗಿದೆ.

ಪಶ್ಚಿಮ ಬಂಗಾಳದ ಬಿರ್ಭುಮ್ ಹಿಂಸಾಚಾರದ ಬಗ್ಗೆ ಚರ್ಚಿಸುವ ವೇಳೆ ಪ್ರತಿಪಕ್ಷಗಳ ಬೇಡಿಕೆಯ ನಂತರ ಉಂಟಾದ ಗದ್ದಲದಲ್ಲಿ ಶಾಸಕರು ಭಾಗಿಯಾಗಿದ್ದರು. ಹಾಗಾಗಿ ಅಶಿಸ್ತಿನ ಆರೋಪದ ಮೇಲೆ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಮತ್ತು ಮುಖ್ಯ ಸಚೇತಕ ಮನೋಜ್ ತಿಗ್ಗಾ ಸೇರಿದಂತೆ 7 ಬಿಜೆಪಿ ಶಾಸಕರನ್ನು ಅಮಾನತುಗೊಳಿಸಲಾಗಿತ್ತು. ಮಾರ್ಚ್ 9ರಂದು ಸುದೀಪ್ ಮುಖೋಪಾಧ್ಯಾಯ, ಮಿಹಿರ್ ಗೋಸ್ವಾಮಿ ಹಾಗೂ ಮಾರ್ಚ್ 28ರಂದು ಸುವೆಂದು ಅಧಿಕಾರಿ, ಮನೋಜ್ ತಿಗ್ಗಾ, ನರಹರಿ ಮಹತೋ, ಮಿಹಿರ್ ಗೋಸ್ವಾಮಿ ಮತ್ತು ಶಂಕರ್ ಘೋಷ್ ಅಮಾನತುಗೊಳಿಸಲಾಗಿತ್ತು.

ಬಿಜೆಪಿ ಶಾಸಕರು ತಮ್ಮ ಅಮಾನತು ಹಿಂಪಡೆಯಲು ಸ್ಪೀಕರ್ ಬಿಮನ್ ಬಂಧೋಪಾಧ್ಯಾಯ ಅವರಿಗೆ ಅರ್ಜಿ ಸಲ್ಲಿಸಿದ್ದರು. ಆದರೆ ತಾಂತ್ರಿಕ ದೋಷದ ಕಾರಣ ಉಲ್ಲೇಖಿಸಿ ಸ್ಪೀಕರ್ ಅವರು ಮನವಿಯನ್ನು ಮರುಸಲ್ಲಿಸುವಂತೆ ಹೇಳಿದ್ದರು. ಇದರಿಂದ ಆಕ್ರೋಶಗೊಂಡ ಬಿಜೆಪಿ ಶಾಸಕರು ವಿಧಾನಸಭೆಯ ಮುಂಭಾಗವೇ ಪ್ರತಿಭಟನೆ ನಡೆಸಿದ್ದರು. ಮಂಗಳವಾರ ಸುವೇಂದು ಅಧಿಕಾರಿ ಕೋಲ್ಕತ್ತಾ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಈ ವಿಷಯವನ್ನು ಪರಿಶೀಲಿಸುವಂತೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಅಮಾತನ್ನು ರದ್ದುಗೊಳಿಸಲಾಗಿದೆ.

Edited By : Vijay Kumar
PublicNext

PublicNext

16/06/2022 05:56 pm

Cinque Terre

30.25 K

Cinque Terre

2