ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸೋನಿಯಾ ಜೊತೆಗೆ, BSY, B.Y ವಿಜಯೇಂದ್ರ ಕೂಡ ಜೈಲಿಗೆ ಹೋಗ್ತಾರೆ : ಭವಿಷ್ಯ ನುಡಿದ ಯತ್ನಾಳ

ಹಾವೇರಿ : ಇ.ಡಿ.ಯಿಂದ ಸಮನ್ಸ್ ಜಾರಿಯಾದ ಬಳಿಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಚಾರಣೆಯನ್ನು ಎದುರಿಸುತ್ತಿದ್ರೆ ಅತ್ತ ಕೋವಿಡ್ ನೆಪ ಹೇಳಿ ಆಸ್ಪತ್ರೆ ಸೇರಿದ್ದಾರೆ.ಇನ್ನು ದೇಶದಾದ್ಯಂತ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆಯೂ ನಡೆಯುತ್ತಿದೆ.

ಇದೆಲ್ಲದರ ಮಧ್ಯೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರಾಜಕೀಯ ದಿಗ್ಗಜರ ಭವಿಷ್ಯ ನುಡಿದಿದ್ದಾರೆ.

ಹೌದು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮಾತ್ರವಲ್ಲದೆ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಅವರ ಸುಪುತ್ರ ಬಿ.ವೈ ವಿಜಯೇಂದ್ರ ಕೂಡಾ ಜೈಲಿಗೆ ಹೋಗಲ್ಲಿದ್ದಾರೆ ಎಂದಿದ್ದಾರೆ.

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಬೇಲೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ದೈಬೈ, ಮಾರಿಷ್ ನಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಬಿವೈ ವಿಜಯೇಂದ್ರ ಆಸ್ತಿ ಹೊಂದಿದ್ದಾರೆ. ಅದಕ್ಕೆ ಆಗಾಗ ದುಬೈ, ಮಾರಿಷ್ ಗೆ ಅವರು ಹೋಗೋದು ಎಂದಿದ್ದಾರೆ.

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಆಪ್ತ ಉಮೇಶ್ ಮನೆಯಲ್ಲಿ ಸಿಕ್ಕ 10 ಕೋಟಿ ಹಣ ಬಿಎಸ್ ಯಡಿಯೂರಪ್ಪ, ಬಿ.ವೈ ವಿಜಯೇಂದ್ರಗೆ ಸೇರಿದ್ದಾಗಿದೆ. ಈ ಪ್ರಕರಣದಲ್ಲಿಯೇ ಅವರು ಜೈಲಿಗೆ ಹೋಗಲಿದ್ದಾರೆ ಎಂದು ಹೇಳಿದರು.

Edited By : Nirmala Aralikatti
PublicNext

PublicNext

16/06/2022 10:50 pm

Cinque Terre

41.8 K

Cinque Terre

31

ಸಂಬಂಧಿತ ಸುದ್ದಿ