ಬೆಂಗಳೂರು: ವಿಶ್ವ ಯೋಗ ದಿನಾಚರಣೆ ಅಂಗವಾಗಿಯೇ ಪ್ರಧಾನಿ ಮೋದಿ ಕರ್ನಾಟಕಕ್ಕೆ ಬರ್ತಾಯಿದ್ದಾರೆ. ಈ ಹಿನ್ನೆಲೆಯಲ್ಲಿಯೇ ಪ್ರಧಾನಿಯ ಪ್ರವಾಸದ ವೇಳಾಪಟ್ಟಿಯನ್ನ ಈಗ ಪ್ರಧಾನಿ ಕಾರ್ಯಾಲಯ ಬಿಡುಗಡೆ ಮಾಡಿದೆ.
ಪ್ರಧಾನಿ ನರೇಂದ್ರ ಮೋದಿ ಜೂನ-20 ಮತ್ತು 21 ರಂದು ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ. ಈ ಎರಡು ದಿನಗಳಲ್ಲಿ ವಿವಿಧ ಕಾರ್ಯಕ್ರಮದಲ್ಲೂ ಪ್ರಧಾನಿ ಮೋದಿ ಭಾಗಿ ಆಗಲಿದ್ದಾರೆ.
ಜೂನ್-20 ರಂದು ಬೆಳಗ್ಗೆ 11.55 ಕ್ಕೆ ವಿಶೇಷ ವಿಮಾನದ ಮೂಲಕ ಯಲಹಂಕ ವಾಯುನೆಲೆಎ ಆಗಮಿಸುತ್ತಿದ್ದಾರೆ. ಬೆಂಗಳೂರಿನ ವಿವಿಧ ಕಾರ್ಯಕ್ರಮಗಳನ್ನು ಮುಗಿಸಿಕೊಂಡು, ಸಂಜೆ 4.50ಕ್ಕೆ ಬೆಂಗಳೂರಿನಿಂದ ಮೈಸೂರಿಗೆ ಆಗಮಿಸುತ್ತಿದ್ದಾರೆ. ಇಲ್ಲಿಯ ಒಂದಷ್ಟು ಕಾರ್ಯಕ್ರಮದಲ್ಲೂ ಮೋದಿ ಭಾಗಿ ಆಗಲಿದ್ದಾರೆ.
ಇದಾದ ಬಳಿಕ ಜೂನ್-21 ರಂದು 6.30 ಮೈಸೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿರೋ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗಿ ಆಗುತ್ತಿದ್ದಾರೆ. ಇಲ್ಲಿಂದ ಬೆಳಗ್ಗೆ 9.25ಕ್ಕೆ ವಿಶೇಷ ವಿಮಾನದ ಮೂಲಕ ತಿರುವನಂತಪುರಕ್ಕೆ ಪ್ರಯಾಣ ಬೆಳೆಸುತ್ತಾರೆ.
PublicNext
17/06/2022 02:34 pm