ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪ್ರಧಾನಿ ಮೋದಿ ಬೆಂಕಿ ಹಚ್ಚಲು ರಾಜ್ಯಕ್ಕೆ ಬಂದಿದ್ದಾರೆ: ವಿನಯ್‌ಕುಮಾರ್ ಸೊರಕೆ

ಮಡಿಕೇರಿ: ಬೆಂಕಿ ಹಚ್ಚಲೆಂದು ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದಿದ್ದಾರೆ ಎಂದು ಮಾಜಿ ಸಚಿವ ಹಾಗೂ ಕೆಪಿಸಿಸಿ ಉಪಾಧ್ಯಕ್ಷ ವಿನಯ್‌ಕುಮಾರ್ ಸೊರಕೆ ಹೇಳಿದ್ದಾರೆ.

ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಕಂಡರೆ ಬಿಜೆಪಿಗೆ ಭಯ. ರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿಗೆ ಅಗತ್ಯದ ಮತ ಇಲ್ಲ. ಇದೇ ಕಾರಣಕ್ಕೆ ಜಾರಿ ನಿರ್ದೇಶನಾಲಯ ಅಧಿಕಾರಿಗಳನ್ನು ಮುಂದೆ ಬಿಟ್ಟು ಕಾಂಗ್ರೆಸ್‌ಅನ್ನು ಭಯಪಡಿಸಲು ಯತ್ನಿಸುತ್ತಿದೆ. ಅದಕ್ಕೆಲ್ಲಾ ಕಾಂಗ್ರೆಸ್ ತಲೆಕೆಡಿಸಿಕೊಳ್ಳುವುದಿಲ್ಲ, ಹೆದರುವುದಿಲ್ಲ ಎಂದು ಹೇಳಿದರು.

ವಿದೇಶಗಳ ಜೊತೆಗಿನ ಭಾರತದ ಸಂಬಂಧ ಹಾಳಾಗಿ ಹೋಗಿದೆ. ಅಗ್ನಿಪಥ್ ಯೋಜನೆ ವಿರುದ್ಧ ದೇಶದ ಜನ ದಂಗೆ ಎದ್ದಿದ್ದಾರೆ. ಇದಕ್ಕೆಲ್ಲ ಕೇಂದ್ರದ ನರೇಂದ್ರ ಮೋದಿ ಸರ್ಕಾರವೇ ಕಾರಣ ಎಂದು ತಿಳಿಸಿದರು.

Edited By : Nagaraj Tulugeri
PublicNext

PublicNext

20/06/2022 07:22 pm

Cinque Terre

44.82 K

Cinque Terre

34

ಸಂಬಂಧಿತ ಸುದ್ದಿ