ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಆಕ್ಸಿಜನ್ ಕೊಡಲಾಗದವರು ಯೋಗ ಮಾಡಲು ಬಂದಿದ್ದಾರೆ: ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ಜನರಿಗೆ ಆಕ್ಸಿಜನ್ ಕೊಡಲು ಆಗದವರು ಇಂದು ಯೋಗ ಮಾಡಲು ಬಂದಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಮೋದಿ ಆಗಮನ್ ಕುರಿತು ವಾಗ್ದಾಳಿ ನಡೆಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಆಕ್ಸಿಜನ್ ಕೊರತೆ ಆಗಿದ್ದರ ಬಗ್ಗೆ ರಾಜ್ಯ ಸರಕಾರದ 40% ಕಮಿಷನ್ ಬಗ್ಗೆ ಪ್ರಧಾನಿಗಳು ಮಾತನಾಡಬೇಕು. 2019, 2020ರಲ್ಲಿ ರಾಜ್ಯದಲ್ಲಿ ಪ್ರವಾಹ ಬಂದಿತ್ತು. ಆಗ ಮೋದಿಯವರು ಇಲ್ಲಿಗೆ ಬರಲಿಲ್ಲ. ನೊಂದ ಜನರಿಗೆ ಸಾಂತ್ವನ ಹೇಳಲಿಲ್ಲ. ಸ್ವತಃ ತಮ್ಮ ಪಕ್ಷದವರೇ ಕಮಿಷನ್ ಬಗ್ಗೆ ದೂರು ನೀಡಿದಾಗ ಯಾಕೆ ಚೌಕಿದಾರ್ ಇಲ್ಲಿಯವರೆಗೆ ಉತ್ತರ ಕೊಟ್ಟಿಲ್ಲ? ಸಬ್ ಅರ್ಬನ್ ಯೋಜನೆ ಹೇಳುತ್ತಲೇ ಬರುತ್ತಿದ್ದಾರೆ. ಅನಂತ್ ಕುಮಾರ್ ಕಾಲದಿಂದ ಹೇಳುತ್ತಿದ್ದಾರೆ. ಆದರೆ ಯೋಜನೆ ಮಾತ್ರ ಏನೂ ಆಗಿಲ್ಲ. ಮೋದಿಯವರಿಂದ ರಾಜ್ಯಕ್ಕೆ ದೊಡ್ಡ ಅನ್ಯಾಯವಾಗಿದೆ. ಅವರ ಸರ್ಕಾರ ಕರ್ನಾಟಕದಲ್ಲಿ ಲೂಟಿ ಹೊಡೆಯುತ್ತಿದೆ. ಭ್ರಷ್ಟಾಚಾರ ಹೆಚ್ಚಾಗಿದೆ. ಇದಕ್ಕೆಲ್ಲ ಪ್ರಧಾನಿಯವರು ಅನುಮತಿ ಕೊಟ್ಟಿದ್ದಾರಾ? ಈ ನಮ್ಮ ಪ್ರಶ್ನೆಗೆ ಅವರು ಉತ್ತರ ಕೊಡಲಿ ಎಂದು ಕಿಡಿಕಾರಿದ್ದಾರೆ.

ನಿರುದ್ಯೋಗದ ಬಗ್ಗೆ ಇಲ್ಲಿ ಮಾತನಾಡಲ್ಲ. ಬೆಲೆ ಏರಿಕೆ ಬಗ್ಗೆ ಮತ್ತೊಮ್ಮೆ ಹೇಳುತ್ತೇನೆ. ಈಗ ಕೇಳಿರುವ ಪ್ರಶ್ನೆಗೆ ಉತ್ತರ ಕೊಡಲಿ. ಕೋವಿಡ್ ವೇಳೆ ಆಕ್ಸಿಜನ್ ಕೊಟ್ರಾ? ಹೈಕೋರ್ಟ್ ಹೇಳಿದ ಮೇಲೆ ಆಕ್ಸಿಜನ್ ಕೊಟ್ರಾ? ಹೈಕೋರ್ಟ್ ಹೇಳಿದರೂ ಆಕ್ಸಿಜನ್ ಕೊಟ್ಟಿರಲಿಲ್ಲ. ಸುಪ್ರೀಂಕೋರ್ಟ್ ಚಾಟಿ ಬೀಸಿದ ಮೇಲೆ ಕೊಟ್ಟರು. ಆಕ್ಸಿಜನ್ ಇಲ್ಲದೇ ಸಾವಿರಾರು ಜನ ಸತ್ತರು. ಚಾಮರಾಜನಗರದಲ್ಲಿ 36 ಜನ ಸಾವನ್ನಪ್ಪಿದ್ದರು. ರಾಜ್ಯದ ಬೇರೆಡೆಯೂ ಆಕ್ಸಿಜನ್ ಇಲ್ಲದೆ ಸತ್ತರು. ಇದಕ್ಕೆಲ್ಲ ಯಾರು ಕಾರಣ ಇದೇ ಮೋದಿಯವರು ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Edited By : Nagaraj Tulugeri
PublicNext

PublicNext

20/06/2022 09:51 pm

Cinque Terre

51.29 K

Cinque Terre

79

ಸಂಬಂಧಿತ ಸುದ್ದಿ