ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೈಸೂರಿನಲ್ಲಿ ಪ್ರಧಾನಿ ಮೋದಿ ಯೋಗಾಭ್ಯಾಸ : ವಿಡಿಯೋ

ಮೈಸೂರು : ಇಂದು ವಿಶ್ವ ಅಂತರರಾಷ್ಟ್ರೀಯ ಯೋಗ ದಿನ. ಈ ದಿನವನ್ನು ಈ ಬಾರಿ ನಮ್ಮ ಪ್ರಧಾನಿ ಮೋದಿ ಮೈಸೂರಿನಲ್ಲಿ ಆಚರಣೆ ಮಾಡಿರುವುದು ನಿಜಕ್ಕೂ ವಿಶೇಷವಾಗಿದೆ.

ಯೋಗ ದಿನಾಚರಣೆ ಮುನ್ನಾ ದಿನವೇ ಪ್ರಧಾನಿಗಳು ರಾಜ್ಯಕ್ಕೆ ಆಗಮಿಸಿರುವುದು ಎಲ್ಲರ ಸಂತಸಕ್ಕೆ ಕಾರಣವಾಗಿದೆ. ಇನ್ನು ಯೋಗ ದಿನಾಚರಣೆ ಹಿನ್ನಲೆಯಲ್ಲಿ ಮಾತನಾಡಿದ ಪ್ರಧಾನಿಗಳು ಯೋಗ ಕೇವಲ ವ್ಯಕ್ತಿಗಾಗಿ ಅಲ್ಲ ಅದು ಮನು ಕುಲದ ಒಳಿತಿಗಾಗಿ, ಇಡೀ ವಿಶ್ವಕ್ಕೆ ಶಾಂತಿ ನೀಡುವ ಶಕ್ತಿ ನಮ್ಮ ಯೋಗಕ್ಕಿದೆ ಎಂದು ಹೇಳಿದರು.

ಮೈಸೂರು ಅರಮನೆ ಮೈದಾನದಲ್ಲಿ ಆಯೋಜಿಸಿರುವ ವಿಶೇಷ ಕಾರ್ಯಕ್ರಮದಲ್ಲಿ ಪ್ರಧಾನಿ ಈ ದಿನ ಆಚರಿಸುತ್ತಿರುವ 8ನೇ ಅಂತಾರಾಷ್ಟ್ರೀಯ ಯೋಗ ದಿನದಂದು ನಾನು ಎಲ್ಲರಿಗೂ ನನ್ನ ಶುಭಾಶಯಗಳನ್ನು ಸಲ್ಲಿಸುತ್ತೇನೆ. ಇಂದು ಪ್ರಪಂಚದ ಎಲ್ಲಾ ಭಾಗಗಳಲ್ಲಿ ಯೋಗವನ್ನು ಅಭ್ಯಾಸ ಮಾಡಲಾಗುತ್ತಿದೆ. ಯೋಗವು ನಮಗೆ ಶಾಂತಿಯನ್ನು ತರುತ್ತದೆ. ಕೇವಲ ನಮಗೆ ಮಾತ್ರವಲ್ಲ ಯೋವು ನಮ್ಮ ರಾಷ್ಟ್ರ ಸೇರಿದಂತೆ ಇಡೀ ಜಗತ್ತಿಗೆ ಶಾಂತಿಯನ್ನು ತರುತ್ತದೆ ಎಂದು ಹೇಳಿದರು.

ಕೆಲವು ವರ್ಷಗಳ ಹಿಂದೆ ಯೋಗ ಮನೆಯೊಳಗೆ, ಆಧ್ಯಾತ್ಮಿಕ ಕೇಂದ್ರಗಳಲ್ಲಿ ನಡೆಯುತ್ತಿತ್ತು. ಈಗ ದೇಶದ ಮೂಲೆ ಮೂಲೆಗಳಲ್ಲಿ ಯೋಗ ನಡೆಯುತ್ತಿದೆ. ಇದು ವ್ಯಕ್ತಿಗಾಗಿ ಯೋಗವಲ್ಲ. ಮನು ಕುಲದ ಒಳಿತಿಗಾಗಿ ಎಂದರು.ವಿಶ್ವಸಂಸ್ಥೆಯು ಜೂನ್ 21 ಅನ್ನು 2014ರ ಡಿಸೆಂಬರ್ 11 ರಂದು ಅಂತಾರಾಷ್ಟ್ರೀಯ ಯೋಗ ದಿನವೆಂದು ಘೋಷಿಸಿತು.

Edited By : Nirmala Aralikatti
PublicNext

PublicNext

21/06/2022 09:21 am

Cinque Terre

65.51 K

Cinque Terre

5

ಸಂಬಂಧಿತ ಸುದ್ದಿ