ನವದೆಹಲಿ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರೇ ರಾಷ್ಟ್ರಪತಿ ಚುನಾವಣೆಗೆ ಎನ್‌ಡಿಯ ಮೈತ್ರಿಕೂಟದ ಅಭ್ಯರ್ಥಿಯಾಗಲಿದ್ದಾರೆಯೇ ಎನ್ನಲಾಗುತ್ತಿದೆ.
ರಾಷ್ಟ್ರಪತಿ ಚುನಾವಣೆಗೆ ಸಂಬಂಧಿಸಿದಂತೆ ಪಕ್ಷದ ಮಹತ್ವದ ಸಭೆಗೂ ಮುನ್ನ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್ ಅವರು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಇದರಿಂದಾಗಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಸ್ಪರ್ಧೆ ಖಚಿತ ಎನ್ನಲಾಗುತ್ತಿದೆ.
ರಾಷ್ಟ್ರಪತಿ ಚುನಾವಣೆಯು ಜುಲೈ 18ರಂದು ನಡೆಯಲಿದೆ. ಚುನಾವಣೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿದಂತೆ ಇದೇ ದಿನ (ಮಂಗಳವಾರ) ಸಂಸದೀಯ ಪಕ್ಷದ ಸಭೆ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಅವರೂ ವರ್ಚುವಲ್ ಆಗಿ ಸಭೆಯಲ್ಲಿ ಭಾಗವಹಿಸುವ ಸಾಧ್ಯತೆ ಇದೆ.
PublicNext
21/06/2022 03:40 pm