ನವದೆಹಲಿ: ಬಿಜೆಪಿಯ ರಾಷ್ಟ್ರಪತಿ ಅಭ್ಯರ್ಥಿಯ ಆಯ್ಕೆ ಭಾರೀ ಕುತೂಹಲ ಕೆರಳಿಸಿತ್ತು.ಅದರಂತೆ ಈಗ ಸರ್ಕಾರ ಮಹಿಳಾ ಅಭ್ಯರ್ಥಿಗೆ ಮಣೆ ಹಾಕಿದೆ.
ಬುಡಕಟ್ಟು ಸಮುದಾಯದ ಮಹಿಳೆಯ ದ್ರೌಪದಿ ಮುರ್ಮುಗೆ ಅವರನ್ನೇ ರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದೆ. ದ್ರೌಪದಿ ಮುರ್ಮು ಅವ್ರು ಈ ಹಿಂದೆ ಜಾರ್ಖಂಡ್‌ನ ಮಾಜಿ ರಾಜಪಾಲರಾಗಿದ್ದವರು.
ಒಡಿಶಾದ ಬುಡಕಟ್ಟು ಜನಾಂಗದ ದ್ರೌಪದಿ ಮುರ್ಮು, ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ ವಿರುದ್ಧ ಸ್ಪರ್ಧಿಸಲಿದ್ದಾರೆ. ಕಾಂಗ್ರೆಸ್ ಪಕ್ಷ ಸೇರಿದಂತೆ ಎಲ್ಲ ವಿಪಕ್ಷಗಳು ಸೇರಿ ರಾಷ್ಟ್ರಪತಿ ಅಭ್ಯರ್ಥಿ ಸ್ಥಾನಕ್ಕೆ ಯಶವಂತ್ ಸಿನ್ಹ ಹೆಸರನ್ನೇ ಸೂಚಿಸಿವೆ.
PublicNext
21/06/2022 09:46 pm