ಮೈಸೂರು: ಕಾಂಗ್ರೆಸ್ ಮಾಜಿ ಸಂಸದೆ, ಸ್ಯಾಂಡಲ್‌ವುಡ್ ಸ್ಟಾರ್ ನಟಿ ರಮ್ಯಾ ಬಿಜೆಪಿ, ಮೋದಿ ಎಂದರೆ ಕಿಡಿ ಕಾರುತ್ತಿದ್ದರು. ಆದರೆ ಈಗ ತಮ್ಮ ಟ್ವೀಟ್ ಮೂಲಕ ಎಲ್ಲರಿಗೂ ಅಚ್ಚರಿ ಮೂಡಿಸಿದ್ದಾರೆ.
ನರೇಂದ್ರ ಮೋದಿ ಕರ್ನಾಟಕ ಪ್ರವಾಸದಲ್ಲಿದ್ದಾರೆ. ಮೈಸೂರಿಗೆ ಅವರು ಭೇಟಿ ನೀಡಿದ್ದು, ಮೈಸೂರಿನಲ್ಲಿ ಏನೇನು ಮಾಡಬಹುದು ಎಂದು ರಮ್ಯಾ ಅವರಿಗೆ ಸಲಹೆ ನೀಡಿದ್ದಾರೆ. ಆ ಸಲಹೆಗಳಲ್ಲಿ 'ಆರ್ಕೆಸ್ಟ್ರಾ ಮೈಸೂರು' ಟ್ರೈಲರ್ ನೋಡುವುದು ಕೂಡ ಒಂದು. ಮೈಸೂರಿನಲ್ಲಿರುವ ಆರ್ಕೆಸ್ಟ್ರಾ ಸಂಸ್ಕೃತಿ ತಿಳಿಯಬೇಕು ಎಂದರೆ ನೀವು ಮೈಸೂರಿನ ಪ್ರತಿಭಾವಂತರು ಮಾಡಿರುವ 'ಆರ್ಕೆಸ್ಟ್ರಾ ಮೈಸೂರು' ಸಿನಿಮಾ ಟ್ರೈಲರ್ ಕೂಡ ನೋಡಬಹುದು ಎಂದು ರಮ್ಯಾ ಟ್ವೀಟ್ ಮಾಡಿದ್ದಾರೆ.
ಟ್ವೀಟ್‌ನಲ್ಲೇನಿದೆ?
'ನಮ್ಮ ಮೈಸೂರಿಗೆ' ಸ್ವಾಗತ ಪ್ರಧಾನಿ ನರೇಂದ್ರ ಮೋದಿಯವರೇ. ಸಮಯವಿದ್ದರೆ ಮೈಸೂರಿನಲ್ಲಿ ಮಾಡಬೇಕಾದ ಕೆಲಸಗಳ ಪಟ್ಟಿ ಹೀಗಿದೆ. ಇಲ್ಲಿನ ರಸ್ತೆಗಳನ್ನು ಉದ್ಘಾಟಿಸಿ, ಇದರ ಅಗತ್ಯ ನಮಗೆ ಬಹಳಷ್ಟಿದೆ. ಇದನ್ನು ಕಲ್ಪಿಸಿದ ಸಚಿವ ನಿತಿನ್ ಗಡ್ಕರಿಗೆ ಧನ್ಯವಾದ. ಇದೇ ವೇಳೆ ಮೈಸೂರಿನ ಜನಪ್ರಿಯ ಮೈಲಾರಿ ಬೆಣ್ಣೆ ದೋಸೆ ರುಚಿಯನ್ನೂ ಸವಿಯಿರಿ, ಇದು ಬಹಳ ಮೃದುವಾದ ದೋಸೆ ಕೂಡ ಹೌದು.
ನೀವು ಮೈಸೂರಿನ ಆರ್ಕೆಸ್ಟ್ರಾ ಸಂಸ್ಕೃತಿಯನ್ನು ವೀಕ್ಷಿಸಬಹುದು, ಸಾಧ್ಯವಾಗದಿದ್ದರೆ ಮೈಸೂರಿನ ಯುವ ಪ್ರತಿಭಾವಂತ ಮೈಸೂರಿಯನ್ನರು ಮಾಡಿದ ಆರ್ಕೆಸ್ಟ್ರಾದ ಟ್ರೈಲರ್ ವೀಕ್ಷಿಸಬಹುದು. ಈ ಪಟ್ಟಿಗೆ ನೀವೇನಾದರೂ ಸೇರಿಸಲು ಇಚ್ಛಿಸಿದರೆ ಕಮೆಂಟ್ ಮಾಡಿ ಎಂದು ರಮ್ಯಾ ಅಭಿಮಾನಿಗಳಿಗೆ ತಿಳಿಸಿದ್ದಾರೆ. ಜೊತೆಗೆ ಪ್ರಧಾನಿ ಮೋದಿಗೆ ಮತ್ತೆ ಮೈಸೂರಿಗೆ ಭೇಟಿ ನೀಡುವಂತೆಯೂ ಆಹ್ವಾನ ನೀಡಿದ್ದಾರೆ.
PublicNext
22/06/2022 03:06 pm