ಶಿವಮೊಗ್ಗ: ಜನ ಸಾಮಾನ್ಯರಿಗೆ ರಕ್ಷಣೆ ಮಾಡುವ ಪೊಲೀಸರ ಮೇಲೆಯೇ ಮುಸ್ಲಿಂ ಗೂಂಡಾಗಳು ಚಾಕು ಹಾಕಿದ್ದಾರೆ. ಚಾಕು ಹಾಕಿ ತಪ್ಪಿಸಿಕೊಂಡು ಹೋಗುವ ಪ್ರಯತ್ನ ಇಲಾಖೆಗೂ ಅಪಮಾನ. ಅಂತಹ ಕೆಲವು ಮುಸ್ಲಿಂ ಗೂಂಡಾಗಳಿಗೆ ತಕ್ಕ ಪಾಠ ಕಲಿಸಬೇಕು ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಬೇಸರ ವ್ಯಕ್ತಪಡಿಸಿದ್ದಾರೆ.
ಚೂರಿ ಇರಿತಕ್ಕೆ ಒಳಗಾಗಿ ತೀರ್ಥಹಳ್ಳಿ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾನ್‌ಸ್ಟೇಬಲ್ ಗುರುನಾಯಕ್ ಅವರ ಆರೋಗ್ಯ ವಿಚಾರಿಸಿದ ಈಶ್ವರಪ್ಪ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, 'ದರೋಡೆ ಪ್ರಕರಣವೊಂದರ ಆರೋಪಿ ಬಂಧಿಸುವ ಸಂದರ್ಭದಲ್ಲಿ ಪೊಲೀಸರ ಮೇಲೆಯೇ ಹಲ್ಲೆ ಮಾಡಿ ಎದೆಗೆ ಚೂರಿಯಿಂದ ಇರಿದು ತಪ್ಪಿಸಿಕೊಂಡಿದ್ದಾನೆ. ಈ ಸಂದರ್ಭದಲ್ಲಿ ಕಾನ್‌ಸ್ಟೇಬಲ್ ಗುರುನಾಯಕ್ ಅವರ ಎದೆಗೆ ಗಾಯವಾಗಿದೆ. ಅದೃಷ್ಟವಶಾತ್ ಜೀವಭಯ ಇಲ್ಲವೆಂದು ವೈದ್ಯರು ಹೇಳಿದ್ದಾರೆ. ಬಳಿಕ ಆರೋಪಿಯನ್ನು ಬಂಧಿಸಲು ಪೊಲೀಸರು ಮತ್ತೊಮ್ಮೆ ಯತ್ನಿಸಿದಾಗ ಮತ್ತೆ ಆತ ಹಲ್ಲೆಗೆ ಯತ್ನಿಸಿದ್ದಾನೆ. ಆತನ ಕಾಲಿಗೆ ಗುಂಡು ಹಾರಿಸಿ ಪೊಲೀಸರು ಆತನನ್ನು ಬಂಧಿಸಿ ದಿಟ್ಟತನ ಮೆರೆದಿದ್ದಾರೆ ಎಂದರು.
ಕೆಲವು ಮುಸ್ಲಿಂ ಗೂಂಡಾಗಳು ಶಿವಮೊಗ್ಗವನ್ನು ಗೂಂಡಾ ರಾಜ್ಯ ಮಾಡಲು ಹೊರಟಿದ್ದು, ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಲಿದೆ. ನಾನು ಈ ಬಗ್ಗೆ ಈಗಾಗಲೇ ಪೊಲೀಸ್ ಅಧಿಕಾರಿಗಳಿಗೆ ಎಚ್ಚರಿಸಿದ್ದೆ. ಸಿಎಂ ಅವರೊಂದಿಗೆ ಶಿವಮೊಗ್ಗದ ಕಾನೂನು ಸುವ್ಯವಸ್ಥೆ ಕುರಿತಾಗಿ ಮಾತನಾಡಲಿದ್ದೇನೆ. ಗಾಂಜಾ ಮಾರಾಟ ಮತ್ತು ದರೋಡೆಯಲ್ಲಿ ತೊಡಗಿಕೊಂಡವರಿಗೆ ಭಯ ಹುಟ್ಟಿಸುವಂತ ಕೆಲಸವನ್ನು ಪೊಲೀಸರು ಮಾಡಬೇಕು ಎಂದು ಹೇಳಿದ್ದಾರೆ.
ಸಿದ್ದರಾಮಯ್ಯನಿಗೆ ಹಿಡಿದಿರುವ ಹುಚ್ಚು ಬಿಡಿಸಲು ಈ ಪ್ರಪಂಚದಲ್ಲಿ ಯಾವುದೇ ಔಷಧಿ ಇಲ್ಲ ಅಂತ ಸಿದ್ದು ವಿರುದ್ಧ ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯ ಟೀಕೆಗೆ ತಿರುಗೇಟು ನೀಡಿದ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ, ಎಂತೆಂಹ ಸಂದರ್ಭದಲ್ಲಿ ಪ್ರಧಾನಿ ಮೋದಿ ಇಡೀ ದೇಶಕ್ಕೆ ಮಾಡಿರುವ ಸೇವೆ ಮೆಚ್ಚಿಕೊಳ್ಳಬೇಕು. ಪ್ರತಿಯೊಬ್ಬ ವ್ಯಕ್ತಿಗೂ ಉಚಿತ ವ್ಯಾಕ್ಸಿನ್ ಕೊಟ್ಟಿದ್ದು ಮೋದಿ. ಇದನ್ನು ಬೇರೆ ದೇಶದವರೇ ಮೆಚ್ಚಿಕೊಂಡಿದ್ದಾರೆ. ಆದರೆ ಸಿದ್ದರಾಮಯ್ಯ ಟೀಕೆ ಮಾಡಲು ಬೆಲೆ ಇಲ್ಲ. ಟೀಕೆ ಮಾಡುವುದೇ ಇವರ ಕೆಲಸವಾಗಿದೆ. ಕೋವಿಡ್ ಸಂದರ್ಭದಲ್ಲಿ ಬಡವರಿಗೆ ಎಷ್ಟೆಷ್ಟು ಕೆಜಿ ಅಕ್ಕಿ ಕೊಟ್ಟಿದ್ದಾರೆ ಎಂದು ಸಿದ್ದರಾಮಯ್ಯ ಅವರಿಗೆ ನೆನಪು ಇದೆಯಾ?. ಟೀಕೆ ಮಾಡುವ ಸಲುವಾಗಿಯೇ ಟೀಕೆ ಮಾಡಿದರೆ ನಮ್ಮ ದೇಶದಲ್ಲಿ ಅದಕ್ಕೆ ಔಷಧಿ ಇಲ್ಲ. ಜನನೇ ಕಾಂಗ್ರೆಸ್‌ನವರಿಗೆ ತಕ್ಕ ಉತ್ತರ ಕೊಟ್ಟಿದ್ದಾರೆ. ಮಹಾರಾಷ್ಟ್ರದಲ್ಲೂ ಜನ ಕಾಂಗ್ರೆಸ್‌ಗೆ ಔಷಧಿ ಕೊಟ್ಟಿದ್ದಾರೆ. ಕಾಂಗ್ರೆಸ್ ಮುಟ್ಟಿದವರೆಲ್ಲಾ ನಾಶ ಆಗ್ತಿದ್ದಾರೆ. ಯುಪಿಯಲ್ಲಿ ಕಾಂಗ್ರೆಸ್ ಎಲ್ಲಿದೆ ಅಂತ ಹುಡುಕಬೇಕು ಎಂದು ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ.
PublicNext
22/06/2022 05:38 pm