ಬೆಳಗಾವಿ: ಕರ್ನಾಟಕ ಇಬ್ಭಾಗವಾಗಲಿದೆ. ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಲಿದೆ. ಹೀಗೆ ಸಚಿವ ಉಮೇಶ್ ಕತ್ತಿ ಈಗ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಬೆಳಗಾವಿಯಲ್ಲಿ ಬಾರ್ ಅಸೋಸಿಯೇಷನ್ ಕಾರ್ಯಕ್ರಮದಲ್ಲಿ ಮಾತನಾಡಿದ ಇವ್ರು,2024 ಹೊತ್ತಿಗೆ ದೇಶದಲ್ಲಿ 50 ರಾಜ್ಯಗಳು ಉದಯಿಸಲಿವೆ ಎಂದು ಹೇಳಿದ್ದಾರೆ.
ಇದೇ ವೇಳೆನೆ ಕರ್ನಾಟಕ ಇಬ್ಭಾಗವಾಗಲಿದ್ದು, ಉತ್ತರ ಕರ್ನಾಟಕದಲ್ಲಿ ಎಲ್ಲ ಮೂಲ ಸೌಕರ್ಯಗಳಿವೆ. ಆದರೆ, ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ಇದೆ. ಕುಡಿಯುವ ನೀರಿನ ಸಮಸ್ಯೆ ಕೂಡ ಇದೆ ಅಂತಲೇ ಸಚಿವ ಉಮೇಶ್ ಕತ್ತಿ ತಿಳಿಸಿದ್ದಾರೆ.
PublicNext
22/06/2022 06:49 pm