ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘಿಸಿ ಅಡ್ಡ ಮತದಾನ ಮಾಡಿದ ಕೋಲಾರ ಶಾಸಕ ಕೆ.ಶ್ರೀನಿವಾಸ ಗೌಡ ಹಾಗೂ ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಅವರನ್ನು ಜೆಡಿಎಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟನೆ ಮಾಡಲಾಗಿದೆ.
ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ನಡೆದ ಕೋರ್ ಕಮಿಟಿ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಕೋರ್ ಕಮಿಟಿ ಅಧ್ಯಕ್ಷ ಬಂಡೆಪ್ಪ ಕಾಶೆಂಪೂರ್ ಅವರು ಮಾಧ್ಯಮಗಳಿಗೆ ತಿಳಿಸಿದರು.
ಹಾಗೆಯೇ ಪಕ್ಷಾಂತರ ನಿಷೇಧ ಕಾಯ್ದೆ ಅಡಿ ಇಬ್ಬರೂ ಶಾಸಕರನ್ನು ವಿಧಾನಸಭೆ ಸದಸ್ಯತ್ವದಿಂದ ಅನರ್ಹಗೊಳಿಸಲು ತಕ್ಷಣವೇ ವಿಧಾನಸಭಾಧ್ಯಕ್ಷರಿಗೆ ದೂರು ನೀಡಲು ಕೂಡ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. ನಾಳೆ ಅಥವಾ ನಾಡಿದ್ದರ ಒಳಗಾಗಿ ಸ್ಪೀಕರ್ ಅವರಿಗೆ ದೂರು ನೀಡಲಾಗುವುದು ಎಂದು ಅವರು ಮಾಹಿತಿ ನೀಡಿದರು.
PublicNext
22/06/2022 07:43 pm