ಔರಂಗಾಬಾದ್: ಭಿನ್ನಮತೀಯ ಶಿವಸೇನೆ ಶಾಸಕರು ಬಿಜೆಪಿಗೆ ಬೆಂಬಲ ಕೊಡಲು ಸಹಿ ಹಾಕಿದ್ದಾರೆ. ಹಾಗೂ ರೆಸಾರ್ಟ್ ರಾಜಕಾರಣ ನಡೆಸಿದ್ದಾರೆ. ಹೀಗಾಗಿ ಶಿವಸೇನಾ ನೇತೃತ್ವದ ಮಹಾರಾಷ್ಟ್ರ ವಿಕಾಸ್ ಅಘಾಡಿ ಸರ್ಕಾರ ಪತನವಾಗುವ ಹಂತದಲ್ಲಿದೆ. ಹೀಗಾಗಿ ಬೆಂಬಲ ವಾಪಸ್ ಪಡೆದು ಬಿಜೆಪಿ ಪರ ನಿಂತಿರುವ ಶಿವಸೇನೆ ಶಾಸಕರಿಗೆ ಇಂದು ಸಂಜೆ 5 ಗಂಟೆಯೊಳಗಾಗಿ ವಾಪಸ್ ಬರಲು ಎಚ್ಚರಿಕೆ ನೀಡಿದ್ದಾರೆ.
ಈ ಬೆಳವಣಿಗೆಗಳ ನಡುವೆ ಔರಂಗಾಬಾದ್‌ನಲ್ಲಿ ಶಿವಸೇನೆ ಕಾರ್ಯಕರ್ತರು ಕಣ್ಣೀರಿಟ್ಟಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಶಿವಸೇನೆ ಕಾರ್ಯಕರ್ತೆಯೊಬ್ಬರು ನಮ್ಮ ಶಿವಸೇನೆಯಿಂದ ಚುನಾಯಿತರಾಗಿ ನಮ್ಮ ಪಕ್ಷಕ್ಕೆ ದ್ರೋಹ ಬಗೆದಿದ್ದಾರೆ. ಸದ್ಯ ಬಿಜೆಪಿಗೆ ಬೆಂಬಲ ನೀಡಿರುವ ಶಾಸಕರು ರಾಜಕೀಯವಾಗಿ ಮುಂಚೂಣಿಗೆ ಬರಲು ಯಾರು ಕಾರಣ ಎಂಬುದನ್ನು ಯೋಚಿಸಬೇಕು ಎಂದು ಕಣ್ಣೀರಿಟ್ಟಿದ್ದಾರೆ.
PublicNext
22/06/2022 08:44 pm