ಭೋಪಾಲ್: ತನ್ನದೆ ಸರ್ಕಾರ ಉಳಿಸಿಕೊಳ್ಳಲು ಆಗದವರು ಮಹಾರಾಷ್ಟ್ರ ಸರ್ಕಾರದ ಪತನ ತಡೆಯಲು ಹೋಗಿದ್ದಾರೆ ಎಂದು ಮಧ್ಯಪ್ರದೇಶದ ಸಿಎಂ ಶಿವರಾಜ್ ಸಿಂಗ್ ಚವ್ಹಾಣ್ ಅವರು ಕಾಂಗ್ರೆಸ್ ಹಿರಿಯ ನಾಯಕ, ಮಧ್ಯಪ್ರದೇಶದ ಮಾಜಿ ಸಿಎಂ ಕಮಲ್ ನಾಥ್ ಅವರಿಗೆ ಟಾಂಗ್ ಕೊಟ್ಟಿದ್ದಾರೆ.
ಮಧ್ಯ ಪ್ರದೇಶದ ಉಜ್ಜಿನಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಮ್ಮ ಸರ್ಕಾರ ಉಳಿಸಿಕೊಳ್ಳಲು ಆಗದ ಕಮಲ್ ನಾಥ್ ಅವರು ಈಗ ಉದ್ಧವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ಸರ್ಕಾರವನ್ನು ಹೇಗೆ ರಕ್ಷಿಸುತ್ತಾರೆ? ಕಾಂಗ್ರೆಸ್ ಕೊನೆಯ ಕ್ಷಣವನ್ನು ಎನಿಸುತ್ತಿದೆ ಎಂದು ಕುಟುಕಿದ್ದಾರೆ.
PublicNext
23/06/2022 11:04 am