ಮೈಸೂರು : ಬಿಜೆಪಿ ಭ್ರಷ್ಟಾಚಾರದ ಹಣದಿಂದ ಆಪರೇಷನ್ ಕಮಲಕ್ಕೆ ಮುಂದಾಗಿದ್ದು, ಇದು ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಬಿಜೆಪಿ ಚಾಳಿ ಇಡೀ ದೇಶಕ್ಕೆ ಹಬ್ಬಿದೆ. ಇದನ್ನು ತಡಯಬೇಕು. ಪಕ್ಷಾಂತರ ಕಾಯ್ದೆ ತಿದ್ದುಪಡಿ ಮಾಡಬೇಕು. ಒಂದು ಪಕ್ಷದಿಂದ ಬೇರೆ ಪಕ್ಷಕ್ಕೆ ಹೋಗದಂತೆ ತಡೆಯಬೇಕು. ಬೇರೆ ಪಕ್ಷಕ್ಕೆ ಹೋದರೆ 10 ವರ್ಷ ಚುನಾವಣೆಗೆ ನಿಲ್ಲದಂತೆ ಮಾಡಬೇಕು. ಇದರಿಂದ ಪ್ರಜಾಪ್ರಭುತ್ವ ಉಳಿಯಲಿದೆ ಎಂದು ಹೇಳಿದ್ದಾರೆ.
ದೇಶದಲ್ಲಿ ಆಪರೇಷನ್ ಕಮಲ ಹುಟ್ಟು ಹಾಕಿದ್ದ ಕರ್ನಾಟಕದ ಬಿಜೆಪಿಯವರು, 2008 ರಲ್ಲಿ ಬಿ.ಎಸ್.ಯಡಿಯೂರಪ್ ಮೊದಲ ಆಪರೇಷನ್ ಕಮಲ ಮಾಡಿದರು. ಬಿಜೆಪಿಯವರಿಗೆ ಎಲ್ಲೂ ಬಹುಮತ ಬಂದಿಲ್ಲ. ಎಲ್ಲಾ ಕಡೆ ಆಪರೇಷನ್ ಕಮಲದಿಂದ ಶಾಸಕರನ್ನು ಖರೀದಿ ಮಾಡಿ ಸರ್ಕಾರ ರಚನೆ ಮಾಡುತ್ತಿದ್ದಾರೆ ಕಿಡಿಕಾರಿದ್ದಾರೆ.
PublicNext
23/06/2022 06:40 pm