ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪ್ರಧಾನಿ ಮಟ್ಟದಲ್ಲೇ ರಾಜ್ಯ ಒಡೆಯುವ ಚರ್ಚೆ ಆಗಿದೆ ಎಂದು ಉಮೇಶ್ ಕತ್ತಿ ಹೇಳಿದ್ದಾರೆ: ಸಿದ್ದರಾಮಯ್ಯ

ಬೆಂಗಳೂರು: ಆಗಾಗ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕಾಗಿ ಬೇಡಿಕೆ ಇಟ್ಟಿದ್ದ ಸಚಿವ ಉಮೇಶ್ ಕತ್ತಿ ತಮ್ಮ ನಿಲುವನ್ನು ಬಲವಾಗಿ ಪ್ರತಿಪಾದಿಸಿದ್ದರು. ಈ ಬಗ್ಗೆ ಪರ-ವಿರೋಧದ ಬಗ್ಗೆ ಚರ್ಚೆಗಳೂ ನಡೆದಿದ್ದವು. ಈಗ ಉಮೇಶ್ ಕತ್ತಿ ಮತ್ತೊಮ್ಮೆ ಅದೇ ಹೇಳಿಕೆಯನ್ನು ಪುನರುಚ್ಛರಿಸಿದ್ದಾರೆ. ಹೀಗಾಗಿ ಈ ಹೇಳಿಕೆ ವಿರುದ್ಧ ಕಾಂಗ್ರೆಸ್ ಕೆಂಡಾಮಂಡಲವಾಗಿದೆ. ಕತ್ತಿ ಹೇಳಿಕೆಯನ್ನು ಖಂಡಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಜ್ಯ ಒಡೆಯುವ ಹೇಳಿಕೆ ನೀಡಿದ್ದ ಉಮೇಶ್ ಕತ್ತಿ ಅವರನ್ನು ಸಂಪುಟದಿಂದ ಕೈಬಿಡಬೇಕೆಂದು ಒತ್ತಾಯಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, 'ರಾಜ್ಯವನ್ನು ಇಬ್ಭಾಗ ಮಾಡುವ ಚರ್ಚೆ ಪ್ರಧಾನಿ ನರೇಂದ್ರ ಮೋದಿ ಅವರ‌ ಮಟ್ಟದಲ್ಲಿಯೇ ನಡೆಯುತ್ತಿದೆ ಎಂಬ ಆಘಾತಕಾರಿ ಸಂಗತಿಯನ್ನು‌ ಸಚಿವ ಉಮೇಶ್ ಕತ್ತಿ ಬಹಿರಂಗ ಪಡಿಸಿದ್ದಾರೆ. ಇದರ ಸತ್ಯಾಸತ್ಯತೆಗಳನ್ನು ಪ್ರಧಾನಿ ಮೋದಿ‌ ಮತ್ತು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸ್ಪಷ್ಟಪಡಿಸಬೇಕು' ಎಂದು ಒತ್ತಾಯಿಸಿದ್ದಾರೆ.

ಸಚಿವರಾದ ಉಮೇಶ್ ಕತ್ತಿಯವರು ಜವಾಬ್ದಾರಿ ಸ್ಥಾನದಲ್ಲಿರುವವರು. ಪಕ್ಷ ಇಲ್ಲವೇ ಸರ್ಕಾರದ ಮಟ್ಟದಲ್ಲಿ ಅಂತಹ ಚರ್ಚೆ ನಡೆಯದೆ ರಾಜ್ಯ ಒಡೆಯುವ ಯೋಜನೆಯ ಬಗ್ಗೆ ಮಾತನಾಡಿರಲಾರರು. ಅವರು ಹೇಳಿರುವುದು‌ ಸುಳ್ಳಾಗಿದ್ದರೆ ಇಂತಹ ಬೇಜವಾಬ್ದಾರಿ ಹೇಳಿಕೆಗಾಗಿ ಅವರನ್ನು ಸಂಪುಟದಿಂದ ಕಿತ್ತು ಹಾಕಬೇಕು. ಸಾವಿರಾರು ಹಿರಿಯ ಕನ್ನಡಿಗರ ಅವಿರತ ಹೋರಾಟದ ಫಲವಾಗಿ ಸ್ಥಾಪನೆಗೊಂಡ ಕರ್ನಾಟಕವನ್ನು ಒಡೆಯುವ ಯೋಚನೆ ಮಾಡುವುದೇ ನಾಡು- ನುಡಿಗೆ ಬಗೆವ ದ್ರೋಹವಾಗುತ್ತದೆ ಎಂದು ಸಿದ್ದರಾಮಯ್ಯ ಆಕ್ರೋಶಿತರಾಗಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ ಸಿದ್ದರಾಮಯ್ಯ, ಸಚಿವ ಉಮೇಶ್ ಕತ್ತಿ ಅವರು ಪ್ರತ್ಯೇಕ ರಾಜ್ಯ ಸ್ಥಾಪನೆಯ ಕೂಗು ಹಾಕುತ್ತಿರುವುದು ಇದೇ ಮೊದಲ‌ ಸಲವೇನಲ್ಲ. ಭಾಷಾ ಸೂಕ್ಷ್ಮ ಪ್ರದೇಶವಾದ ಬೆಳಗಾವಿಯಲ್ಲಿಯೇ ಇಂತಹ ಪ್ರಚೋದನಕಾರಿ ಹೇಳಿಕೆಗಳ ಪರಿಣಾಮದ ಹೊಣೆಯನ್ನು ರಾಜ್ಯ ಬಿಜೆಪಿ ಸರ್ಕಾರವೇ ಹೊರಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

Edited By : Nagaraj Tulugeri
PublicNext

PublicNext

23/06/2022 07:40 pm

Cinque Terre

28.87 K

Cinque Terre

3

ಸಂಬಂಧಿತ ಸುದ್ದಿ