ಬೆಂಗಳೂರು: ಮನಬಂದಂತೆ ಹೇಳಿಕೆ ಕೊಡುವ ಸಚಿವ ಉಮೇಶ್ ಕತ್ತಿಯನ್ನ ಸಂಪುಟದಿಂದ ಕಿತ್ತು ಹಾಕಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.2024ಕ್ಕೆ ಕರ್ನಾಟಕ ಇಬ್ಭಾಗವಾಗೋದು ಖಚಿತ ಎಂಬ ಸಚಿವ ಉಮೇಶ್ ಕತ್ತಿ ಮಾತಿಗೆ ಪಕ್ಷಾತೀತವಾಗಿ ಭಾರೀ ಆಕ್ರೋಶ ವ್ಯಕ್ತವಾಗಿದೆ.
ಕನ್ನಡಿಗರ ಅವಿರತ ಹೋರಾಟದ ಫಲವಾಗಿ ಕರ್ನಾಟಕ ಸ್ಥಾಪನೆಯಾಗಿದೆ. ಕರ್ನಾಟಕವನ್ನು ಒಡೆಯುವ ಯೋಚನೆ ಮಾಡುವುದೇ ನಾಡು-ನುಡಿಗೆ ಬಗೆವ ದ್ರೋಹವಾಗುತ್ತದೆ. ಸಚಿವರಾದ ಉಮೇಶ್ ಕತ್ತಿಯವರು ಜವಾಬ್ದಾರಿ ಸ್ಥಾನದಲ್ಲಿರುವವರು. ಪಕ್ಷ ಇಲ್ಲವೆ ಸರ್ಕಾರದ ಮಟ್ಟದಲ್ಲಿ ಅಂತಹ ಚರ್ಚೆ ನಡೆಯದೆ, ರಾಜ್ಯ ಒಡೆಯುವ ಯೋಜನೆಯ ಬಗ್ಗೆ ಮಾತನಾಡಿರಲಾರರು. ಅವರು ಹೇಳಿರುವುದು ಸುಳ್ಳಾಗಿದ್ದರೆ ಇಂತಹ ಬೇಜವಾಬ್ದಾರಿ ಹೇಳಿಕೆಗಾಗಿ ಅವರನ್ನು ಸಂಪುಟದಿಂದ ಕಿತ್ತು ಹಾಕಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಇದರ ಸತ್ಯಾಸತ್ಯತೆಗಳನ್ನು ಪ್ರಧಾನಿ ಮೋದಿ ಮತ್ತು ಮುಖ್ಯಮಂತ್ರಿ ಬೊಮ್ಮಾಯಿ ಅವರು ಸ್ಪಷ್ಟಪಡಿಸಬೇಕು ಸಿದ್ದರಾಮಯ್ಯ ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ.
PublicNext
24/06/2022 07:30 am