ಯಾದಗಿರಿ: ಜಿಲ್ಲೆಯ ಹುಣಸಗಿ ಪಟ್ಟಣದಲ್ಲಿರುವ ತಹಶೀಲ್ ಕಚೇರಿಯಲ್ಲಿ ಶಿರಸ್ತೇದಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕಲ್ಲಪ್ಪ ಅವರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ಇಂದು ಹುಣಸಗಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ವಾಲ್ಮೀಕಿ ನಾಯಕ ಸಂಘಟನೆ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು.
ಶಿರಸ್ತೇದಾರ್ ಕಲ್ಲಪ್ಪ ಅವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ದುಷ್ಕರ್ಮಿಗಳನ್ನು ಸರಕಾರಿ ಕೆಲಸದಿಂದಲೇ ವಜಾಗೊಳಿಸಬೇಕು ಹಾಗೂ ಹಲ್ಲೆಕೋರರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಿ ಬಂಧಿಸಬೇಕೆಂದು ಪ್ರತಿಭಟನೆಕಾರರು ಒತ್ತಾಯಿಸಿದರು.
ವರದಿ: ಮೌನೇಶ ಬಿ.ಮಂಗಿಹಾಳ, ಪಬ್ಲಿಕ್ ನೆಕ್ಸ್ಟ್ ಯಾದಗಿರಿ
PublicNext
24/06/2022 04:28 pm