ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನನ್ನ ಸರ್ಕಾರ ತೆಗೆದಂತೆ 'ಮಹಾ' ಸರಕಾರ ತೆಗೆಯಲು ಹೊರಟಿದ್ದಾರೆ: ಬಿಜೆಪಿ ವಿರುದ್ಧ ಎಚ್‌ಡಿಕೆ ಕಿಡಿ

ರಾಮನಗರ: ನನ್ನ ಸರ್ಕಾರ ತೆಗೆದಂತೆ ಮಹಾರಾಷ್ಟ್ರ ಸರಕಾರವನ್ನು ತೆಗೆಯಲು ಹೊರಟಿದ್ದಾರೆ ಎಂದು ಮಾಜಿ ಸಿಎಂ, ಜೆಡಿಎಸ್ ನಾಯಕ ಎಚ್‌.ಡಿ. ಕುಮಾರಸ್ವಾಮಿ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಚನ್ನಪಟ್ಟಣದಲ್ಲಿ ನಿನ್ನೆ (ಶುಕ್ರವಾರ) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ಸರಕಾರ ತೆಗೆಯಲು ಬಿಜೆಪಿ ಹೊರಟಿದೆ. ನಮಗೆ ಏನು ಗೊತ್ತಿಲ್ಲ ಎಂಬಂತೆ ಬಿಜೆಪಿಯವರು ಇದ್ದಾರೆ. ಆದರೆ ಇಡೀ ದೇಶಕ್ಕೆ ಇದು ಬಿಜೆಪಿಯ ಆಟವೆಂದು ಗೊತ್ತು. ಬಿಜೆಪಿ ಸರಕಾರವಿರುವ ರಾಜ್ಯಗಳಿಗೆ ಶಾಸಕರನ್ನು ಕರೆದೊಯ್ದಿದ್ದಾರೆ. ಶಾಸಕರನ್ನು ಹೈಜಾಕ್ ಮಾಡಿಕೊಂಡು ಅಲ್ಲಿಟ್ಟುಕೊಂಡಿದ್ದಾರೆ. ನಾನು ಮುಖ್ಯಮಂತ್ರಿಯಾಗಿದ್ದಾಗ, ನಮ್ಮ ಶಾಸಕರನ್ನು ಮುಂಬೈಗೆ ಕರೆದೊಯ್ದಿದ್ದರು ಎಂದು ಕಿಡಿಕಾರಿದ್ದಾರೆ.

ಇರುವ ವಾಸ್ತವಾಂಶ ಹೇಳಿದ್ದೇನೆ. ಯಾವುದೇ ರೀತಿ ಯಾರ ಜತೆ ರಾಜಿಯಾಗಲಿ ಅಥವಾ ಅನುಕಂಪದ ಪ್ರಶ್ನೆ ಇಲ್ಲ. ಈ ವ್ಯವಸ್ಥೆಯನ್ನು ಬಿಜೆಪಿ ಸರಕಾರ ಯಾವ ರೀತಿ ದುರುಪಯೋಗ ಪಡಿಸಿಕೊಳ್ಳುತ್ತಿದೆ. ಸ್ವಾಯುತ್ತ ಸಂಸ್ಥೆಗಳು ಯಾವ ರೀತಿ ಕೆಲಸ ಮಾಡುತ್ತಿವೆ ಎಂಬುದನ್ನು ಚರ್ಚೆ ಮಾಡಿದ್ದೇನೆ. ರಾಹುಲ್ ಗಾಂಧಿ ಅಥವಾ ಕಾಂಗ್ರೆಸ್ ನಾಯಕರನ್ನು ಒಲೈಸಿಕೊಳ್ಳಲು ಹೇಳಿಲ್ಲ ಎಂದು ಸ್ಪಷ್ಟಪಡಿಸಿದರು.

ಕಾಂಗ್ರೆಸ್ ಬಗ್ಗೆ ಆಗಲಿ ಅಥವಾ ರಾಹುಲ್ ಗಾಂಧಿ ಅವರ ಬಗ್ಗೆ ಆಗಲಿ ನನಗೆ ಸಾಫ್ಟ್ ಕಾರ್ನರ್ ಇಲ್ಲ. ನಾನು ಇದ್ದ ವಿಷಯವನ್ನೇ ಹೇಳಿದ್ದೇನೆ. ಕಾಂಗ್ರೆಸ್ ನಾಯಕರ ರೀತಿ ನಾನು ಬೀದಿಯಲ್ಲಿ ಬ್ಯಾರಿಕೇಡ್ ಹತ್ತಿ ಡಾನ್ಸ್ ಮಾಡುವುದಕ್ಕೆ ಹೋಗಬೇಕೇ ಎಂದು ಪ್ರಶ್ನಿಸಿದ್ದಾರೆ.

'ನಾನು ಈ ಹೇಳಿಕೆ ಕೊಟ್ಟಾಗ ಒಬ್ಬ ಬಿಜೆಪಿ ಸಂಸದರೆ ನನಗೆ ಫೋನ್ ಮಾಡಿ ಶಹಬ್ಬಾಸ್ ಗಿರಿ ಹೇಳಿದರು. ಈ ವ್ಯವಸ್ಥೆ ಬಗ್ಗೆ ಸರಿಯಾಗಿ ಮಾತನಾಡಿದ್ದೀರಿ ಎಂದು ಹೇಳಿದರು. ನಮ್ಮ ಕುತ್ತಿಗೆ ಕುಯ್ದಿದ್ದೆ ಕಾಂಗ್ರೆಸ್‍ನವರು. ನಾನು ಯಾಕೆ ಅವರ ಬಗ್ಗೆ ಸಾಫ್ಟ್ ಕಾರ್ನರ್ ತೋರಿಸಲಿ. ಕಾಂಗ್ರೆಸ್ ಹಾಗೂ ಬಿಜೆಪಿ ಬಗ್ಗೆ ಸಾಫ್ಟ್ ಕಾರ್ನರ್ ಆಗುವ ಪ್ರಶ್ನೆಯೆ ಇಲ್ಲ ಎಂದು ಕುಮಾರಸ್ವಾಮಿ ಗುಡುಗಿದರು.

‘ರಾಷ್ಟ್ರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳ ನಡವಳಿಕೆ ನೋಡಿದ್ದೇನೆ. ಇದನ್ನೇ ಮುಂದಿಟ್ಟುಕೊಂಡು ಮುಂದಿನ ಚುನಾವಣೆಯಲ್ಲಿ ಜನರಿಗೆ ಮನದಟ್ಟು ಮಾಡುವ ಕೆಲಸ ಮಾಡುತ್ತೇವೆ. ಎರಡು ರಾಷ್ಟ್ರೀಯ ಪಕ್ಷಗಳ ಕುತಂತ್ರದ ಬಗ್ಗೆ ಅರಿವು ಮೂಡಿಸುತ್ತೇವೆ. ಪ್ರಾದೇಶಿಕ ಪಕ್ಷವನ್ನು ಬೆಂಬಲಿಸಿ ಎಂದು ಜನರ ಮುಂದೆ ಹೋಗುತ್ತೇವೆ' ಎಂದು ಅವರು ಹೇಳಿದರು.

Edited By : Vijay Kumar
PublicNext

PublicNext

25/06/2022 07:26 am

Cinque Terre

114.4 K

Cinque Terre

16

ಸಂಬಂಧಿತ ಸುದ್ದಿ