ಬೆಂಗಳೂರು: ಕೇಂದ್ರ ಸರ್ಕಾರವು ಜಾರಿಗೊಳಿಸಲು ಮುಂದಾಗಿರುವ ಅಗ್ನಿಪಥ್ ಯೋಜನೆ ವಿರೋಧಿಸಿ ಕೆ.ಆರ್ ಪುರದ ಬ್ಲಾಕ್ ಕಾಂಗ್ರೆಸ್ ವತಿಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದ ಮಾಜಿ ವಿಧಾನ ಪರಿಷತ್ತಿನ ಸದಸ್ಯ ನಾರಾಯಣ ಸ್ವಾಮಿ ಅವರು, ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಯು ದೇಶದ ಯುವ ಸಮೂಹದ ಮೇಲೆ ಬರೆ ಎಳೆಯುವಂತಾ ಯೋಕನೆಯನ್ನು ಜಾರಿಗೆ ತರಲು ಹೊರಟಿದೆ. ವರ್ಷಕ್ಕೆ ನಲವತ್ತು ಸಾವಿರ ಸೈನಿಕರನ್ನು ನೇಮಕ ಮಾಡಿಕೊಂಡು ನಾಲ್ಕು ವರ್ಷಗಳ ನಂತರ ಯುವಕರು ನಿರುದ್ಯೋಗಿಗಳಾಗಿ ಮಾಡುವ ಯೋಜನೆ ಇದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿ ವರ್ಷ ಎರಡು ಕೋಟಿ ಉದ್ಯೋಗದ ಭರವಸೆ ನೀಡಿ ಅಧಿಕಾರಕ್ಕೆ ಬಂದ ಪ್ರಧಾನಮಂತ್ರಿ ಉದ್ಯೋಗಗಳನ್ನು ಸೃಷ್ಟಿಸುವಲ್ಲಿ ವಿಫಲರಾಗಿದ್ದಾರೆ ಎಂದರು.
ಸರ್ಕಾರವು ಅಗ್ನಿಪಥ್ ಯೋಜನೆಯು ಹಿಂಪಡೆಯದಿದ್ದರೆ ಕಾಂಗ್ರೆಸ್ ಪಕ್ಷದಿಂದ ಇನ್ನೂ ಉಗ್ರವಾದ ಹೋರಾಟ ಮಾಡಬೇಕಾಗುತ್ತದೆ ಎಂದು ಹೇಳಿದರು.
PublicNext
27/06/2022 09:56 pm