ಬೆಂಗಳೂರು: ತುರ್ತಾಗಿ ನವದೆಹಲಿಗೆ ಬನ್ನಿ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಕಾಂಗ್ರೆಸ್ ಹೈಕಮಾಂಡ್‌ನಿಂದ ಕರೆ ಬಂದಿದೆ. ಈ ಹಿನ್ನೆಲೆಯಲ್ಲಿ ಉಭಯ ನಾಯಕರು ಇಂದು (ಮಂಗಳವಾರ) ದೆಹಲಿಗೆ ತೆರಳಿ ಸಂಜೆ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಲಿದ್ದಾರೆ ಎನ್ನಲಾಗಿದೆ.
ರಾಹುಲ್ ಗಾಂಧಿ ಅವರು ಸಿದ್ದರಾಮಯ್ಯ, ಡಿ. ಕೆ. ಶಿವಕುಮಾರ್ ಜೊತೆ ಪ್ರತ್ಯೇಕವಾಗಿ ಸಭೆ ನಡೆಸಲಿದ್ದಾರೆ. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸಹ ಸಭೆಯಲ್ಲಿ ಜೊತೆಯಲ್ಲಿ ಇರಲಿದ್ದಾರೆ ಎಂಬ ಮಾಹಿತಿ ಲಭಿಸಿದೆ.
PublicNext
28/06/2022 03:26 pm