ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಾವಣಗೆರೆ: ಕಾಂಗ್ರೆಸ್ ಪಠ್ಯಪುಸ್ತಕ ವಿಚಾರ ವೈಭವೀಕರಿಸುತ್ತಿದೆ ಭೈರತಿ ಬಸವರಾಜ್

ದಾವಣಗೆರೆ: ಪಠ್ಯಪುಸ್ತಕ ಪರಿಷ್ಕರಣೆ ವಿಚಾರವನ್ನು ಕಾಂಗ್ರೆಸ್‌ನವರು ವೈಭವೀಕರಣ ಮಾಡ್ತಿದ್ದಾರೆ. ಅವರ ಅವಧಿಯಲ್ಲಿ ತಪ್ಪು ಆಗಿದೆ. ಅವರ ಬೆನ್ನನ್ನು ಕೂಡ ಅವರು ನೋಡಿಕೊಳ್ಳಬೇಕು. ಏನಾದ್ರೂ ತಪ್ಪು ಇದ್ದರೆ ಅದನ್ನು ಸರಿಪಡಿಸಲು ಸರ್ಕಾರ ಮುಕ್ತವಾಗಿದೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಹೇಳಿದರು.

ಮಾಧ್ಯಮದವರ ಜೊತೆ ಮಾತನಾಡಿ ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರಕ್ಕೆ ಸಂಬಂಧಿಸಿದಂತೆ ಪರಮ ಪೂಜ್ಯರಾದ ಬೆಳ್ಳೂಡಿಯ ಕಾಗಿನೆಲೆಯ ಶ್ರೀ ನಿರಂಜನಾನಂದಪುರಿ ಅವರ ಜೊತೆ ಸಿಎಂ ಬಳಿ ನಾನು ಹೋಗಿದ್ದೆ. ಅದಕ್ಕೆ ಬೇರೆ ಅರ್ಥ ಕಲ್ಪಿಸುವ ಅವಶ್ಯಕತೆ ಇಲ್ಲ. ಹಿಂದಿನ ಅವಧಿಯಲ್ಲಿ ಕೂಡ ಅನೇಕ ತಪ್ಪು ಆಗಿವೆ. ಅದನ್ನು ಸರಿಪಡಿಸಿ ವಿತರಣೆ ಮಾಡುವಂತಾಗಿದೆ. ಸಿಎಂ ಸಕಾರಾತ್ಮಕವಾಗಿ ಒಪ್ಪಿ ಮಾಡಿಕೊಡುವುದಾಗಿ ಹೇಳಿದ್ದಾರೆ. ಪರಮ ಪೂಜ್ಯರು ಕೂಡ ಸಂತೋಷದಿಂದ ಒಪ್ಪಿದ್ದಾರೆ ಎಂದು ಹೇಳಿದರು.

ಮಾಜಿ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸ್ಪರ್ಧೆ ವಿಚಾರಕ್ಕೆ ಸಂಬಂಧಿಸಿದಂತೆ ಇದರ ಬಗ್ಗೆ ಸಿದ್ದರಾಮಯ್ಯ ಅವರನ್ನೇ ಕೇಳಿ ಎಂದು ಹೇಳಿದರು. ಮುಂದಿನ ಸಿಎಂ ಕುಮಾರಸ್ವಾಮಿ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಅದು ಅವರ ಪಕ್ಷಕ್ಕೆ ಸೇರಿದ ವಿಚಾರ. ಯಾರನ್ನಾದರೂ ಸಿಎಂ ಮಾಡಿಕೊಳ್ಳಲಿ. ಕಾಂಗ್ರೆಸ್ ನಿಂದ ಬಿಜೆಪಿಗೆ ಬಹಳಷ್ಟು ಜನರ ಬರ್ತಾರೆ. ಮುಂದಿನ ದಿನಗಳಲ್ಲಿ ಬಹಿರಂಗ ಆಗುತ್ತದೆ. ಬೆಳವಣಿಗೆಗಳನ್ನು ಕಾದು ನೋಡಿ ಎಂದು ಸಚಿವ ಬೈರತಿ ಬಸವರಾಜ್ ಹೇಳಿದರು.

Edited By :
PublicNext

PublicNext

28/06/2022 05:13 pm

Cinque Terre

44.9 K

Cinque Terre

0

ಸಂಬಂಧಿತ ಸುದ್ದಿ