ನವದೆಹಲಿ: ನಾಳೆ (ಜೂನ್ 30ರಂದು) ಮಹಾರಾಷ್ಟ್ರ ವಿಧಾನಸಭೆಯಲ್ಲಿ ವಿಶ್ವಾಸಮತ ಪರೀಕ್ಷೆಗೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ.
ಮಹಾರಾಷ್ಟ್ರ ರಾಜ್ಯಪಾಲ ಕೋಶ್ಯಾರಿ ಅವರು ಜೂನ್ 30ರಂದು ಬಹುಮತ ಸಾಬೀತುಪಡಿಸುವಂತೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಸೂಚನೆ ನೀಡಿದ್ದರು. ಇದನ್ನು ಪ್ರಶ್ನಿಸಿ ಶಿವಸೇನೆಯ ಮುಖ್ಯ ಸಚೇತಕ ಸುನಿಲ್ ಪ್ರಭು ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಈ ಸಂಬಂಧ ಇಂದು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ನಾಳೆಯೇ ಬಹುಮತ ಸಾಬೀತು ಪಡಿಸುವಂತೆ ಮಹಾರಾಷ್ಟ್ರ ರಾಜ್ಯಪಾಲರು ನೀಡಿರುವ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.
ನಾಳೆ ಬೆಳ್ಳಿಗೆ 11 ಗಂಟೆಗೆ ಬಹುಮತ ಸಾಬೀತು ಮಾಡುವಂತೆ ಸಿಎಂ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಆದೇಶ ನೀಡಿದೆ. ನ್ಯಾ. ಸೂರ್ಯಕಾಂತ್ ನೇತೃತ್ವದ ದ್ವಿಸದಸ್ಯ ಈ ಆದೇಶ ನೀಡಿದ್ದು, ನಾಳೆ ಸಿಎಂ ಉದ್ಧವ್ ಠಾಕ್ರೆ ಅಘಾಡಿ ಸರ್ಕಾರಕ್ಕೆ ಅಗ್ನಿಪರೀಕ್ಷೆ ಎದುರಾಗಿದೆ.
3 ಪ್ರಮುಖ ಬೇಡಿಕೆಗಳೊಂದಿಗೆ ಏಕನಾಥ್ ಶಿಂಧೆ ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಿ ತುರ್ತು ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಿದ್ದರು. ಈ ಮನವಿ ಪುರಸ್ಕರಿಸಿದ ಸುಪ್ರೀಂಕೋರ್ಟ್ ಈಗ ತುರ್ತು ವಿಚಾರಣೆ ಮಾಡಿದೆ. ಅಲ್ಲದೇ ತನ್ನ ಮಹತ್ವದ ತೀರ್ಪನ್ನು ಕೊಟ್ಟಿದೆ.
PublicNext
29/06/2022 09:28 pm