ಬೆಂಗಳೂರು: ಬಿಜೆಪಿ ನೇತೃತ್ವದ ಎನ್ ಡಿಎ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಜೆಡಿಎಸ್ ಬೆಂಬಲ ನೀಡುವ ಇಂಗಿತವನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವ್ಯಕ್ತಪಡಿಸಿದ್ದಾರೆ.ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ದ್ರೌಪದಿ ಮುರ್ಮು ಅವರಿಗೆ ಬಹುಮತದ ಸಂಖ್ಯೆ ಈಗಾಗಲೇ ಸಿಕ್ಕದೆ.
ನಮ್ಮ ಪಕ್ಷದ ಬೆಂಬಲ ಅವಶ್ಯಕತೆ ಇಲ್ಲ. ಆದರೂ ನಮ್ಮ ಬೆಂಬಲ ಕೇಳಿದ್ದಾರೆ. ಅದು ಅವರ ಔದಾರ್ಯ ಎಂದು ಬೆಂಬಲ ನೀಡುವ ಬಗ್ಗೆ ಪರೋಕ್ಷವಾಗಿ ಹೇಳಿದರು.ಆದಿವಾಸಿ ಸಮುದಾಯದ ಮಹಿಳೆಯೊಬ್ಬರು ಇಷ್ಟು ದೊಡ್ಡ ಸಾಧನೆ ಮಾಡಿರುವುದು ಸ್ಪೂರ್ತಿದಾಯಕ ಎಂದು ಹೇಳಿದರು.
PublicNext
29/06/2022 09:31 pm