ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಈ ಬಾರಿ ಕಾಂಗ್ರೆಸ್‌ಗೆ 120ಕ್ಕೂ ಅಧಿಕ ಸ್ಥಾನ: ಇದು ಸಮೀಕ್ಷೆ ಪ್ರಕಾರ

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆದರೆ ಕಾಂಗ್ರೆಸ್ ಪಕ್ಷ 120ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲಲಿದೆ. ಬಿಜೆಪಿ 70ಕ್ಕೂ ಅಧಿಕ ಸ್ಥಾನ ಗಳಿಸಲಿದೆ. ಹಾಗೂ ಜೆಡಿಎಸ್ 25 ಸ್ಥಾನಗಳಿಗೆ ಸೀಮಿತವಾಗಲಿದೆ. 6ರಿಂದ 8 ಮಂದಿ ಪಕ್ಷೇತರರು ಗೆಲ್ಲಲಿದ್ದಾರೆ ಎಂದು ಸಮೀಕ್ಷೆಯೊಂದು ಹೇಳಿದೆ.

ಕಾಂಗ್ರೆಸ್‌ ರಾಜಕೀಯ ತಂತ್ರಜ್ಞ ಸುನೀಲ್‌ ಕನ್ನಗೋಲು ಅವರು ಸಿದ್ಧಪಡಿಸಿ ಕಾಂಗ್ರೆಸ್‌ ಹೈಕಮಾಂಡ್‌ಗೆ ಸಲ್ಲಿಸಿರುವ ಪ್ರಾಥಮಿಕ ಸಮೀಕ್ಷಾ ವರದಿಯ ಮುಖ್ಯಾಂಶವಿದು. ಕಾಂಗ್ರೆಸ್‌ ಪಾಲಿಗೆ ಈ ಆಶಾದಾಯಕ ಸಮೀಕ್ಷಾ ವರದಿ ನೀಡಿರುವ ಕನ್ನಗೋಲು, ಇದಕ್ಕೆ ಕಾರಣಗಳನ್ನು ಹಾಗೂ ಕೆಲ ಎಚ್ಚರಿಕೆಗಳನ್ನು ನೀಡಿದ್ದಾರೆ ಮತ್ತು ಮುಂದಿನ ಆರು ತಿಂಗಳಿಗೆ ಸೀಮಿತವಾಗಿ ಕಾಂಗ್ರೆಸ್‌ ಯಾವ್ಯಾವ ರೀತಿಯ ಹೋರಾಟಗಳನ್ನು ಹಮ್ಮಿಕೊಳ್ಳಬೇಕು ಎಂಬ ನೀಲನಕ್ಷೆಯನ್ನು ಕೂಡ ಕೊಟ್ಟಿದ್ದಾರೆ ಎಂದು ಕಾಂಗ್ರೆಸ್‌ನ ಉನ್ನತ ಮೂಲಗಳು ತಿಳಿಸಿವೆ.

Edited By : Nagaraj Tulugeri
PublicNext

PublicNext

30/06/2022 10:03 am

Cinque Terre

55.96 K

Cinque Terre

52

ಸಂಬಂಧಿತ ಸುದ್ದಿ