ಮುಂಬೈ: ಮಹಾರಾಷ್ಟ್ರದ ರಾಜಕೀಯದಲ್ಲಿ ಅಕ್ಷರಶಃ ಬಿರುಗಾಳಿ ಎಬ್ಬಿಸಿದ ಶಿವಸೇನೆ ನಾಯಕ ಏಕನಾಥ್ ಶಿಂಧೆ ಗೋವಾದಿಂದ ಮುಂಬೈ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.
ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ದೇವೇಂದ್ರ ಫಡ್ನವೀಸ್ ಆಯ್ಕೆಯಾಗಿದ್ದಾರೆ. ಬಂಡಾಯ ನೇತೃತ್ವ ವಹಿಸಿದ್ದ ಏಕನಾಥ್ ಶಿಂಧೆ ಉಪಮುಖ್ಯಮಂತ್ರಿಯಾಗಲಿದ್ದಾರೆ ಎಂದು ಮಾಹಿತಿ ಹೊರಬಿದ್ದಿದೆ. ಈ ಹಿನ್ನೆಲೆಯಲ್ಲಿ ಅವರು ಮಾಜಿ ಸಿಎಂ ಫಡ್ನವೀಸ್ ಮತ್ತು ಮಾಜಿ ಸಚಿವ ಶಿಂಧೆ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರನ್ನು ಭೇಟಿಯಾಗಲಿದ್ದಾರೆ. ನಾಳೆ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಉದ್ಧವ್ ಠಾಕ್ರೆ ತಮ್ಮ ಬಹುಮತವನ್ನು ಸಾಬೀತುಪಡಿಸಬೇಕು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದ ಬೆನ್ನಲ್ಲೇ ನಿನ್ನೆ ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
PublicNext
30/06/2022 02:57 pm