ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದೇವೇಂದ್ರ ಫಡ್ನವಿಸ್ ಮಹಾರಾಷ್ಟ್ರ ಡಿಸಿಎಂ

ಮುಂಬೈ : ಮಹಾರಾಷ್ಟ್ರ ರಾಜಕಾರಣದಲ್ಲಿ ಮತ್ತೊಂದು ಬೆಳವಣಿಗೆ ನಡೆದಿದೆ. ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಸಂಜೆಯ ವೇಳೆಗೆ ಹಠಾತ್ ಆಗಿ ಸುದ್ದಿಗೋಷ್ಠಿ ನಡೆಸಿದ ದೇವೇಂದ್ರ ಫಡ್ನವಿಸ್, ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ ಅಧಿಕಾರ ಸ್ವೀಕರಿಸಲಿದ್ದಾರೆ. ಇದು ಸಂಪೂರ್ಣವಾಗಿ ಶಿವಸೇನೆ ಸರ್ಕಾರವಾಗಿ ಇರಲಿದೆ. ಈ ಸರ್ಕಾರಕ್ಕೆ ನಮ್ಮ ಬೆಂಬಲ ಇರುತ್ತದೆ. ಆದರೆ, ನಾನು ಇದರ ಭಾಗವಾಗಿರುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದರು. ಆ ಮೂಲಕ ಉಪಮುಖ್ಯಮಂತ್ರಿ ಅಥವಾ ಸಂಪುಟದಲ್ಲಿ ಸಚಿವರಾಗುವ ಯಾವುದೇ ಗುರಿ ತಮಗಿಲ್ಲ ಎಂದು ಹೇಳಿದ್ದರು.

ಇನ್ನು ಫಡ್ನವಿಸ್ ಅವರು ಸರ್ಕಾರದ ಭಾಗವಾಗಬೇಕು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಒತ್ತಾಯಿಸಿದ್ದಾರೆ. ಇದಕ್ಕೆ ಒಪ್ಪಿಗೆ ಸೂಚಿಸಿರುವ ಫಡ್ನವಿಸ್ ಹೊಸ ಸರ್ಕಾರದಲ್ಲಿ ಡಿಸಿಎಂ ಆಗಿರಲಿದ್ದಾರೆ.

Edited By : Nirmala Aralikatti
PublicNext

PublicNext

30/06/2022 07:23 pm

Cinque Terre

31.55 K

Cinque Terre

0

ಸಂಬಂಧಿತ ಸುದ್ದಿ