ಬಂಡಾಯ ಗುಂಪಿನ ನಾಯಕ ಏಕನಾಥ್ ಶಿಂಧೆ ಮಹಾರಾಷ್ಟ್ರದ ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದರು. ರಾಜಭವನದಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಪ್ರಮಾಣವಚನ ಬೋಧಿಸಿದ್ದಾರೆ.
ಬಾಳಾಠಾಕ್ರೆ ಮತ್ತು ಈಶ್ವರನ ಹೆಸರಿನಲ್ಲಿ ಪ್ರತಿಜ್ಞೆ ಸ್ವೀಕರಿಸಿದ ಏಕನಾಥ್ ಶಿಂಧೆ, ಮಹಾರಾಷ್ಟ್ರದ ಸಮಗ್ರ ಅಭಿವೃದ್ಧಿಗಾಗಿ ಕೆಲಸ ಮಾಡುತ್ತೇನೆ. ನಾನು ಸಿಎಂ ಆಗಲು ಅವಕಾಶ ಮಾಡಿಕೊಟ್ಟ ಎಲ್ಲರಿಗೂ ಧನ್ಯವಾದಗಳು ಎಂದರು.ಇನ್ನು, ಬಿಜೆಪಿ ಹಿರಿಯ ನಾಯಕ ದೇವೇಂದ್ರ ಫಡ್ನವಿಸ್ ಡಿಸಿಎಂ ಆಗಿ ಪ್ರಮಾಣವಚನ ತೆಗೆದುಕೊಂಡಿದ್ದಾರೆ. ಆಯ್ದ ಶಾಸಕರು ನಾಳೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.
PublicNext
30/06/2022 08:13 pm