ಮುಂಬೈ ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು ಸದ್ಯ ತಣ್ಣಗಾಗಿದೆ. ಯಾರೂ ನಿರೀಕ್ಷಿಸಿರದ ರೀತಿ ಬಂಡಾಯ ಶಾಸಕರ ನಾಯಕ ಏಕನಾಥ್ ಶಿಂಧೆ ಅವರು ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದರ ಬೆನ್ನಲ್ಲೇ ಜುಲೈ 2ರಿಂದ ಎರಡು ದಿನಗಳ ಕಾಲ ವಿಧಾನಮಂಡಲ ವಿಶೇಷ ಅಧಿವೇಶನ ಕರೆಯಲಾಗಿದೆ.
ಮಹಾರಾಷ್ಟ್ರ ನೂತನ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ ಅಧಿಕಾರ ಸ್ವೀಕರಿಸಿದ ಬಳಿಕ ನಡೆದ ಮೊದಲ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಧಿವೇಶನದ ಮೊದಲ ದಿನವಾದ ಶನಿವಾರ ವಿಧಾನಸಭಾ ಸ್ಪೀಕರ್ ಹುದ್ದೆಗೆ ಚುನಾವಣೆ ನಡೆಯಲಿದೆ ಎಂದು ಅವರು ಹೇಳಿದ್ದಾರೆ. ನಾನಾ ಪಟೋಲೆ ರಾಜೀನಾಮೆಯಿಂದ ಸ್ಪೀಕರ್ ಸ್ಥಾನ ತೆರವಾಗಿದೆ. ಆ ಸ್ಥಾನಕ್ಕೆ ಜುಲೈ 2 ರಂದು ಚುನಾವಣೆ ನಡೆಯಲಿದೆ ಮತ್ತು ಅಂದೇ ನೂತನ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ವಿಶ್ವಾಸಮತ ಯಾಚಿಸುವ ಸಾಧ್ಯತೆ ಇದೆ.
PublicNext
01/07/2022 08:05 am