ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪೌರ ಕಾರ್ಮಿಕರು ಇಂದು ಮುಷ್ಕರ ಹಿಂಪಡೆಯಲಿದ್ದಾರೆ: ಸಿಎಂ ಬೊಮ್ಮಾಯಿ

ಬೆಂಗಳೂರು: ಎಲ್ಲ ಪೌರಕಾರ್ಮಿಕರೊಂದಿಗೆ ಮಾತನಾಡಿದ್ದೇವೆ. ಅವರ ಪ್ರಕ್ರಿಯೆಗಳನ್ನು ಕೊಡಬೇಕು ಎಂದು ಹೇಳಿದ್ದೇವೆ ಅವರು ಕೊಡುತ್ತಾರೆ.

ಇವತ್ತು ಮುಷ್ಕರವನ್ನ ಹಿಂತೆಗೆದುಕೊಳ್ಳುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಹಾನುಭೂತಿಯಿಂದ ಮಾನವೀಯತೆಯಿಂದ ಕ್ರಮ ತೆಗೆದುಕೊಂಡು ಪೌರ ಕಾರ್ಮಿಕರಿಗಾಗಿ ಕಾನೂನು ಮಾಡಬೇಕು ಎಂದುಕೊಂಡಿದ್ದೇವೆ. ಮೂರು ತಿಂಗಳಲ್ಲಿ ಯಾವ ರೀತಿ ನೇಮಕಾತಿ ಪ್ರಕ್ರಿಯೆ ನಡೆಸಬೇಕು ಎಂಬ ಬಗ್ಗೆ ಚರ್ಚೆ ಮಾಡಿದ್ದೇವೆ. ಯಾರಿಗೆ ನೇರ ಪಾವತಿ ಇದೆ ಅಂತವರಿಗೆ ನೇಮಕಾತಿ ಮಾಡಲು ಒಪ್ಪಿಕೊಂಡಿದ್ದೇವೆ. ಅದಕ್ಕೆ ಲೀಗಲ್ ಮತ್ತು ಟೆಕ್ನಿಕಲ್ ಆಗಿ ಏನು ಮಾಡಬೇಕು ಎಂಬ ಬಗ್ಗೆ ಪೌರ ಕಾರ್ಮಿಕರು ಮತ್ತು ಅಧಿಕಾರಿಗಳ ಜಂಟಿ ಸಮಿತಿ ಮಾಡಿದ್ದೇವೆ. ಪೌರ ಕಾರ್ಮಿಕರ ಸಂರಕ್ಷಣೆಗೆ, ಆರೋಗ್ಯ, ಶಿಕ್ಷಣ ಬಗ್ಗೆ ಹೊಸ ಕಾನೂನನ್ನು ರಚನೆ ಮಾಡಬೇಕಿದೆ. ಮುಂದಿನ ಅಧಿವೇಶನದಲ್ಲಿ ಈ ವಿಚಾರವನ್ನು ಪ್ರಸ್ತಾಪ ಮಾಡುತ್ತೇನೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಹೈದರಾಬಾದ್‌ಲ್ಲಿ ನಡೆಯುತ್ತಿರುವ ಕಾರ್ಯಕಾರಣಿ ಸಭೆ ಬಗ್ಗೆ ಮಾತನಾಡಿದ ಅವರು, ನಾನು ಕೂಡ ಕಾರ್ಯಕಾರಣಿಯಲ್ಲಿ ಭಾಗವಹಿಸಲು ಹೊರಟಿದ್ದೇನೆ. ನಾಳೆ ರವಿವಾರ ಸಂಜೆ ವಾಪಸ್ ಬರಲಿದ್ದೇನೆ. ರಾಷ್ಟ್ರದ ಎಲ್ಲಾ ನಾಯಕರು ಅಲ್ಲಿಗೆ ಆಗಮಿಸುತ್ತಾರೆ. ಅಮಿತ್ ಶಾ ಅವರೊಂದಿಗೆ ಸಮಯ ಸಿಕ್ಕರೆ ಮಾತನಾಡುತ್ತೇನೆ. ಅಮಿತ್ ಶಾ ಹಾಗೂ ಜೆಪಿ ನಡ್ದ ಅವರನ್ನು ಭೇಟಿಯಾಗುವ ಪ್ರಯತ್ನ ಮಾಡುತ್ತೇನೆ ಎಂದು ಸಿಎಂ ಹೇಳಿದ್ದಾರೆ. ಇದೇ ವೇಳೆ ಬೆಂಗಳೂರು ಜಿಲ್ಲಾಧಿಕಾರಿ ಮೇಲಿನ ಭ್ರಷ್ಟಾಚಾರ ಆರೋಪದ ಸಿಎಂ ಬಗ್ಗೆ ಏನನ್ನೂ ಉತ್ತರಿಸದೇ ತೆರಳಿದ್ದಾರೆ.

Edited By : Shivu K
PublicNext

PublicNext

02/07/2022 11:25 am

Cinque Terre

140.02 K

Cinque Terre

0

ಸಂಬಂಧಿತ ಸುದ್ದಿ