ನವದೆಹಲಿ:ಕಾಂಗ್ರೆಸ್‌ಗೆ ಸಡ್ಡು ಹೊಡೆದು 'ಪಂಜಾಬ್ ಲೋಕ ಕಾಂಗ್ರೆಸ್' ಪಕ್ಷ ಸ್ಥಾಪಿಸಿದ್ದ ಪಂಜಾಬ್ ಮಾಜಿ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆಗಳಿವೆ ಎಂದು ಮೂಲಗಳು ಹೇಳಿವೆ.
ಎರಡು ಬಾರಿ ಪಂಬಾಜ್ ಮುಖ್ಯಮಂತ್ರಿಯಾಗಿದ್ದ ಕ್ಯಾಪ್ಟನ್ ಅಮರಿಂದರ್ ಸಿಂಗ್ ಕಾಂಗ್ರೆಸ್ ಪಕ್ಷ ತೊರೆದು ಪಂಜಾಬ್ ಲೋಕ ಕಾಂಗ್ರೆಸ್ (ಪಿಎಲ್‌ಸಿ) ಪಕ್ಷವನ್ನು ಸ್ಥಾಪನೆ ಮಾಡಿದ್ದರು. 2022ರ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದರು. 80 ವರ್ಷದ ಕ್ಯಾಪ್ಟನ್ ಅಮರಿಂದರ್ ಸಿಂಗ್ ಉಪರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯಾಗುವ ಸಾಧ್ಯತೆ ಇದೆ ಎಂದು ಅವರ ಕಚೇರಿ ಹೇಳಿದೆ. ಬೆನ್ನುಮೂಳೆಯ ಶಸ್ತ್ರಚಿಕಿತ್ಸೆಗಾಗಿ ಅವರು ಸದ್ಯ ಲಂಡನ್‌ನಲ್ಲಿದ್ದಾರೆ.
ಇಂದು (ಭಾನುವಾರ) ಕ್ಯಾಪ್ಟನ್ ಅಮರಿಂದರ್ ಸಿಂಗ್‌ಗೆ ಶಸ್ತ್ರಚಿಕಿತ್ಸೆ ನಡೆಯಲಿದೆ. ಬಳಿಕ ಪ್ರಧಾನಿ ನರೇಂದ್ರ ಮೋದಿ ಉಪರಾಷ್ಟ್ರಪತಿ ಚುನಾವಣೆ ಬಗ್ಗೆ ಅವರ ಜೊತೆ ಮಾತುಕತೆ ನಡೆಸಲಿದ್ದಾರೆ. ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಲು ಜುಲೈ 19 ಕೊನೆಯ ದಿನವಾಗಿದೆ.
PublicNext
03/07/2022 08:27 am